Advertisement

ಸಂಸತ್ತಿನ ಚಳಿಗಾಲದ ಅಧಿವೇಶನ: ಡಿ.15ರಿಂದ ಜನವರಿ 5

11:39 AM Nov 24, 2017 | Team Udayavani |

ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಈ ಬಾರಿ ಡಿ.15ರಿಂದ ಜನವರಿ 5ರ ವರೆಗೆ ನಡೆಸಬಹುದೆಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿಯು ಸರಕಾರಕ್ಕೆ ಶಿಫಾರಸು ಮಾಡಿದೆ.

Advertisement

ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿಯು ಇಂದು  ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಸಂಸತ್ತಿನ ಚಳಿಗಾಲದ ಅಧಿವೇಶನದ ದಿನಾಂಕಗಳನ್ನು ನಿರ್ಧರಿಸಿತು.

ಸಂಸತ್ತಿನ ಚಳಿಗಾಲದ ಅಧಿವೇಶನವು ಎರಡೂ ಸದನಗಳಲ್ಲಿ ಸುಲಲಿತವಾಗಿ ಮತ್ತು ಫ‌ಲಪ್ರದವಾಗಿ ನಡೆಯಲು ವಿರೋಧ ಪಕ್ಷಗಳ ಸಹಿತ ಎಲ್ಲ ಪಕ್ಷಗಳು ಸಹಕರಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್‌ ವಿನಂತಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next