Advertisement

Metro Station: ಕುಸಿದು ಬಿದ್ದ ಮೆಟ್ರೋ ನಿಲ್ದಾಣದ ಭಾಗ… ನಾಲ್ವರ ಸ್ಥಿತಿ ಗಂಭೀರ

01:09 PM Feb 08, 2024 | Team Udayavani |

ನವದೆಹಲಿ: ಮೆಟ್ರೋ ನಿಲ್ದಾಣದ ಭಾಗವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

Advertisement

ಕುಸಿದು ಬೀಳುವ ವೇಳೆ ಓರ್ವ ವ್ಯಕ್ತಿ ಅವಶೇಷಗಳಡಿ ಸಿಲುಕಿದ್ದು ಕೂಡಲೇ ಆತನನ್ನು ರಕ್ಷಣೆ ಮಾಡಿ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಇತರ ಮೂವರಿಗೆ ಗಾಯಗಳಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಕಾನೂನು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಸ್ಥಳೀಯ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಸ್ಥಳದಲ್ಲಿದ್ದು, ಕ್ರೇನ್ ಹಾಗೂ ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

ಇದನ್ನೂ ಓದಿ: Baba Siddique: ಕಾಂಗ್ರೆಸ್ ಜತೆಗಿನ 48 ವರ್ಷಗಳ ನಂಟು ತೊರೆದ ಮಾಜಿ ಸಚಿವ ಬಾಬಾ ಸಿದ್ದಿಕ್

Advertisement
Advertisement

Udayavani is now on Telegram. Click here to join our channel and stay updated with the latest news.

Next