Advertisement

ಪಾರ್ಟ್‌ಟೈಂ ಉದ್ಯೋಗ ನೆಪ: 5.43 ಲಕ್ಷ ರೂ. ವಂಚನೆ

12:14 AM Jul 11, 2023 | Team Udayavani |

ಮಂಗಳೂರು: ಟೆಲಿಗ್ರಾಂ ಖಾತೆಯಿಂದ ಲಿಂಕ್‌ ಕಳುಹಿಸಿ ಪಾರ್ಟ್‌ ಟೈಂ ಉದ್ಯೋಗ ನೀಡುವುದಾಗಿ 5.43 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಜೂ.29ರಂದು ದೂರುದಾರರಿಗೆ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿ ಅನಂತರ ಟಾಸ್ಕ್ಗಳನ್ನು ನೀಡಿದ್ದಾನೆ. ಟಾಸ್ಕ್ಗಳನ್ನು ಪೂರ್ಣಗೊಳಿಸಿದರೆ ಹಣ ನೀಡುವುದಾಗಿ ನಂಬಿಸಿದ್ದಾನೆ. ಮೊದಲ ಟಾಸ್ಕ್ಗೆ ಹಣ ಹೂಡಿಕೆ ಮಾಡಿಸಿ ಅನಂತರ 1,237 ರೂ.ಗಳನ್ನು ದೂರುದಾರರ ಖಾತೆಗೆ ವರ್ಗಾಯಿಸಿದ್ದಾನೆ. ಇದನ್ನು ನಂಬಿದ ದೂರುದಾರರು ಇನ್ನಷ್ಟು ಲಾಭ ಗಳಿಸುವ ಉದ್ದೇಶದಿಂದ ಮುಂದಿನ ಟಾಸ್ಕ್ಗಳನ್ನು ಮಾಡಿದ್ದಾರೆ. ಅಪರಿಚಿತ ವ್ಯಕ್ತಿ ದೂರುದಾರರ ಖಾತೆಯಿಂದ ಜು. 4ರಿಂದ ಜು. 8ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 5,43,151 ರೂ.ಗಳನ್ನು ಹಣ ವರ್ಗಾಯಿಸಿಕೊಂಡು ಯಾವುದೇ ಹಣ ವಾಪಸ್‌ ನೀಡದೆ ವಂಚಿಸಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next