Advertisement

ಶಿಕ್ಷಕರ ನೇಮಕಾತಿ ಹಗರಣ: ಪಾರ್ಥ ಚಟರ್ಜಿ ಸೇರಿ ಏಳು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

06:35 PM Dec 22, 2022 | Team Udayavani |

ನದೆಹಲಿ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಜೈಲು ಪಾಲಾದ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಶಾಲಾ ಶಿಕ್ಷಣ ಹಗರಣದ ಏಳು ಆರೋಪಿಗಳನ್ನು ಸಿಬಿಐ ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

Advertisement

ಗುರುವಾರ ಚಟರ್ಜಿ, ಎಸ್ಪಿ ಸಿನ್ಹಾ, ಸುಬೀರೇಶ್ ಭಟ್ಟಾಚಾರ್ಯ, ಅಶೋಕೆ ಸಹಾ ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಲ್ಲರ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.

ಹಗರಣದ ಆರೋಪಿಗಳು ಈಗ ಕ್ರಿಸ್ಮಸ್ ಮತ್ತು ಹೊಸ ವರ್ಷವನ್ನು ಜೈಲಿನಲ್ಲಿ ಕಳೆಯಬೇಕಾಗಿದೆ.

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಾರ್ಥ ಚಟರ್ಜಿ ಅವರನ್ನು ಜುಲೈ 2022 ರಲ್ಲಿ ಬಂಧಿಸಲಾಯಿತು. 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಮಾಜಿ ಸಚಿವರ ವಿರುದ್ಧ ಆರೋಪ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next