Advertisement

ಆರೋಗ್ಯಕ್ಕೆ ಕ್ರೀಡೆಗಳಲ್ಲಿ ಭಾಗವಹಿಸಿ

05:20 PM Jan 29, 2020 | Suhan S |

ಆನೇಕಲ್‌: ವಿದ್ಯಾರ್ಥಿಗಳು ನಿತ್ಯ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್‌ ತಿಳಿಸಿದರು.

Advertisement

ತಾಲೂಕಿನ ಚಂದಾಪುರ ಪುರಸಭೆ ವ್ಯಾಪ್ತಿಯ ಇಗ್ಗಲೂರು-ಸೂರ್ಯಸಿಟಿಯ ಶಾಲೆಯಲ್ಲಿ ನಡೆದ ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಆಟವನ್ನು ಶಿಕ್ಷಕರು ಹೇಳಿಕೊಡ  ಬೇಕು. ಆಗ ಮಾತ್ರ ವಿದ್ಯಾರ್ಥಿಯ ಕಲಿಕೆಯಲ್ಲಿ ಪ್ರಗತಿ ಕಾಣಲು ಸಾಧ್ಯ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವು ದರಿಂದ ಸರ್ಕಾರ ವಿದ್ಯಾರ್ಥಿಗಳಿಗೆವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರಿ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಶಿಕ್ಷಕರು ಸಮಾಜದ ಶಿಲ್ಪಿಗಳು: ಶಿಕ್ಷಕ ವೀರಭದ್ರಪ್ಪ ಮಾತನಾಡಿ, ಸಮಾಜದಲ್ಲಿ ನಿಜವಾದ ಶಿಲ್ಪಿಗಳು ಶಿಕ್ಷಕರು. ಮಕ್ಕಳ ಮನಸ್ಸು ಹಸಿ ಮುದ್ದೆಯಂತ್ತಿರುತ್ತದೆ. ಅಂತಹ ಮುದ್ದೆಯನ್ನು ತಿದ್ದಿ-ತೀಡಿ ಅವರಿಗೆ ಸಂಸ್ಕಾರಯುತ ಶಿಕ್ಷಣ ನೀಡಿ, ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವುದು ಶಿಕ್ಷಕರಿಂದ ಮಾತ್ರ ಸಾಧ್ಯವಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಮತ್ತು ಟಿವಿಗೆ ಬಲಿಯಾಗಿ ತಮ್ಮಲ್ಲಿರುವ ಅಪಾರವಾದ ಶಕ್ತಿಯನ್ನು ಮರೆಯುತ್ತಿದ್ದಾರೆ. ಮೊಬೈಲ್‌ ಬಿಡಿ ಪುಸ್ತಕ ಇಡಿ ಎಂಬ ಅಭಿಯಾನನ್ನು ಪ್ರತಿ ಮನೆಯಿಂದ ಆರಂಭವಾಗಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಪ್ತಗಿರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ರಾಮರೆಡ್ಡಿ, ಕಾರ್ಯದರ್ಶಿ ಯಾದವ್‌, ಪ್ರಾಂಶುಪಾಲರಾದ ವೀಣಾ ಮಾಂಟಿ ಡಿಸೋಜ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next