Advertisement

ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಅಂಗವಿಕಲರ ಪಾಲ್ಗೊಳ್ಳುವಿಕೆ ಅಗತ್ಯ: ಗೆಹ್ಲೋಟ್‌

12:25 AM Jan 08, 2024 | Team Udayavani |

ಬೆಂಗಳೂರು: ವಿಶೇಷ ಚೇತನ ಮಕ್ಕಳು ಮತ್ತು ಯುವಕರು ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ಇತರ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಮರ್ಥರಾಗಿದ್ದು, ಅವರಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ತಿಳಿಸಿದರು.

Advertisement

ರಾಷ್ಟ್ರೀಯ ಸಂಸ್ಥೆಗಳಾದ ಬಹು ಅಂಗವೈಕಲ್ಯ (ಎನ್‌ಐಇಪಿಎಂಡಿ) ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “ದಿವ್ಯ ಕಲಾಶಕ್ತಿ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಕ್ಷಮ ಭಾರತ, ಸಮರ್ಥ ಭಾರತ ಮತ್ತು ಸ್ವಾವಲಂಬಿ ಭಾರತದಲ್ಲಿ ಅಂಗವಿಕಲರ ಪಾಲ್ಗೊಳ್ಳುವಿಕೆ ಅಗತ್ಯ. ಅವರ ಸಬಲೀಕರಣ ದೃಷ್ಟಿಯಿಂದ ಸರಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಕೇಂದ್ರ ರಾಜ್ಯ ಸಚಿವ ನಾರಾಯಣ ಸ್ವಾಮಿ, ಎನ್‌ಐಇಪಿಎಂಡಿ ನಿರ್ದೇಶಕ ಡಾ| ನಚಿಕೇತ ರಾವುತ್‌, ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next