Advertisement
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
426 ಪ್ರಕರಣ- 45,550 ರೂ. ದಂಡ
ಕಾಪು ಮತ್ತು ಮಲ್ಪೆ ಸಮುದ್ರ ತೀರದಲ್ಲಿ ಧೂಮಪಾನ ಮುಕ್ತ ಸಮುದ್ರ ತೀರ ಎಂಬ ನಾಮಫಲಕಗಳನ್ನು ಅಳವಡಿಸಲಾಗಿದೆ, ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕೋಟ್ಪಾ ನಿಯಂತ್ರಣ ತನಿಖಾ ದಳವು 2019ರ ಎಪ್ರಿಲ್ನಿಂದ ಜೂನ್ ವರೆಗೆ ಒಟ್ಟು 426 ಪ್ರಕರಣಗಳನ್ನು ದಾಖಲಿಸಿ 45,550 ರೂ. ದಂಡ ವಸೂಲಿ ಮಾಡಿದೆ ಎಂದು ಡಾ| ವಾಸುದೇವ ಹೇಳಿದರು.
ಎಎಸ್‌ಪಿ ಕುಮಾರ ಚಂದ್ರ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಎಂ.ಜಿ. ರಾಮ, ಜಿಲ್ಲಾ ಸರ್ಜನ್ ಡಾ| ಮಧುಸೂದನ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲುಷಿತ ಐಸ್‌ಕ್ಯಾಂಡಿ: ಕ್ರಮಕ್ಕೆ ಸೂಚನೆ
ಉಡುಪಿ: ಇತ್ತೀಚೆಗೆ ಜಿಲ್ಲೆಯಲ್ಲಿ ಕಲುಷಿತ ಐಸ್‌ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲುಷಿತ ನೀರಿನ ಐಸ್‌ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು ಈ ಕುರಿತಂತೆ ಐಸ್‌ಕ್ಯಾಂಡಿ ತಯಾರಕರ ವಿರುದ್ಧ ಇದುವರೆಗೆ ಸೂಕ್ತ ಕ್ರಮ ಕೈಗೊಳ್ಳದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಈ ಕುರಿತಂತೆ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ. ಇದರಿಂದ ಕಲುಷಿತ ಆಹಾರ ಉತ್ಪನ್ನ ತಯಾರಕರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಹಾರ ತಯಾರಿಕಾ ಘಟಕಗಳಿಗೆ ಸುರಕ್ಷತಾ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಆಹಾರ ತಯಾರಿಕೆಯ ಸುರಕ್ಷಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳು ಮತ್ತು ಬೀಚ್‌ಗಳಲ್ಲಿನ ಗೂಡಂಗಡಿಗಳಲ್ಲಿ ತಯಾರಿಸುವ ಆಹಾರದ ಗುಣಮಟ್ಟ ಪರಿಶೀಲಿಸಬೇಕು ಮತ್ತು ಐಸ್ ಕ್ರೀಂ ಇತ್ಯಾದಿ ಸೇವಿಸಲು ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿರುವ ಕುರಿತು ಪರಿಶೀಲಿಸಿ ವರದಿ ನೀಡಬೇಕು ಎಂದರು.
ಜಿಲ್ಲೆಯ ಮೀನುಗಳಲ್ಲಿ ಫಾರ್ಮಾಲಿನ್ ಸಿಂಪಡಣೆ ಕುರಿತಂತೆ ಪರಿಶೀಲಿಸಲಾಗಿ ನೆಗೆಟಿವ್ ವರದಿ ಬಂದಿದೆ. 68 ಮೀನು ಸಾಗಾಟ ವಾಹನಗಳಿಗೆ ಆಹಾರ ಸುರಕ್ಷತಾ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ 15 ಕುಡಿಯುವ ನೀರು ಘಟಕಗಳಿದ್ದು ಅನಧಿಕೃತ ಘಟಕಗಳು ಇಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ್ ಮಾಹಿತಿ ನೀಡಿದರು.
ಎಎಸ್ಪಿ ಕುಮಾರ ಚಂದ್ರ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಎಂ.ಜಿ. ರಾಮ, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ಉಪಸ್ಥಿತರಿದ್ದರು.
ಕಳವಳ
ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ಆರೋಗ್ಯ ವಿಭಾಗ ಮಾಡಿದ ಸಮೀಕ್ಷೆ ಪ್ರಕಾರ ಉಡುಪಿ ಜಿಲ್ಲೆಯಲ್ಲಿ 1.20 ಲಕ್ಷ ಮಂದಿ ಬೀಡಿ ಉದ್ಯಮದಲ್ಲಿ ತೊಡಗಿದ್ದಾರೆ. ಬೇರೆ ಉದ್ಯೋಗಾವಕಾಶ ಒದಗಿಸಿದರೆ ಶೇ. 25 ಮಂದಿ ಬೀಡಿ ಕೆಲಸ ಬಿಡಲು ಸಿದ್ಧರಿದ್ದಾರೆ. ಇ ಸಿಗರೇಟ್ ಬ್ಯಾನ್ ಆಗಿದ್ದರೂ ಜಿಲ್ಲೆಯ 2 ಕಡೆ ಮಾರಾಟವಿದೆ. ಕಾಲೇಜು ವಿದ್ಯಾರ್ಥಿಗಳಲ್ಲೇ ಸೇವನೆ ಅಧಿಕವಾಗಿದೆ. ಹಲವೆಡೆಗಳಲ್ಲಿ ಬಿಡಿ ಸಿಗರೇಟ್ ಮಾರಾಟ ಮಾಡುತ್ತಿದ್ದು, ಇದರಿಂದ ಪ್ಯಾಕ್ ಮೇಲಿರುವ ತಂಬಾಕು ದುಷ್ಪರಿಣಾಮ, ಕ್ವಿಟ್ಲೈನ್ ಸಂಖ್ಯೆ ಬಗ್ಗೆ ಮಾಹಿತಿ ದೊರೆಯುತ್ತಿಲ್ಲ ಎಂದು ಕೆಎಂಸಿ ವೈದ್ಯಕೀಯ ಆರೋಗ್ಯ ವಿಭಾಗದ ಡಾ| ಮುರಳೀಧರ್ ಕುಲಕರ್ಣಿ ತಿಳಿಸಿದರು.