Advertisement

ಕುಳಾಯಿ ಶೋರ್ ಬೀಚ್ ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿ ಪೊಲೀಸರ ದಾಳಿ : ಪ್ರಕರಣ ದಾಖಲು

10:03 PM May 04, 2021 | Team Udayavani |

ಮಂಗಳೂರು : ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್  ರೆಸಾರ್ಟ್ ಪಾರ್ಟಿ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

Advertisement

ಕೋವಿಡ್ ಕಟ್ಟುನಿಟ್ಟಿನ ನಿಯಮವನ್ನು ಲೆಕ್ಕಿಸದೆ ಕುಳಾಯಿ ಬೀಚ್ ನ ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿ ನಡೆಸುತ್ತಿದ್ದ ಮಾಹಿತಿ ಪಡೆದ ಎಸಿ ಮದನ್ ಮೋಹನ್,ಎಸಿಪಿ ಅವರ ಜಂಟಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಸಂಬಂಧ ಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೋರ್ ರೆಸಾರ್ಟ್ ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗಿತ್ತು. ಇದು ಮಾತ್ರವಲ್ಲದೆ ಡಿಜೆ, ಮದ್ಯಪಾನ ವ್ಯವಸ್ಥೆ ಮಾಡಲಾಗಿತ್ತು‌. ಈ ಬಗ್ಗೆ ಮಾಹಿತಿ ಪಡೆದ ಎಸಿ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ಧಾಳಿ ನಡೆಸಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಹಾಗೂ ರೆಸಾರ್ಟ್ ಮಾಲೀಕರ ವಿರುದ್ಧ ಕೇಸು ದಾಖಲಿಸಲು ಸುರತ್ಕಲ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸುರತ್ಕಲ್ ಪೋಲೀಸರು ಕೇಸು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next