Advertisement

ಸದಸ್ಯತ್ವ ಅಭಿಯಾನದಿಂದ ಪಕ್ಷದ ಬಲವರ್ಧನೆ: ಯಾದವಾಡ

03:18 PM Jul 07, 2019 | Suhan S |

ರಾಮದುರ್ಗ: ದೇಶದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಮೂಲಕ ತಳಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದ ವರೆಗೆ ಪಕ್ಷದ ಬಲವರ್ಧನೆಯ ಗುರಿ ಹೊಂದಲಾಗಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

Advertisement

ಸ್ಥಳೀಯ ಮರಾಠಾ ಕಲ್ಯಾಣ ಮಂಟಪದಲ್ಲಿ ಶನಿವಾರ ಬಿಜೆಪಿ ತಾಲೂಕು ಘಟಕದಿಂದ ಹಮ್ಮಿಕೊಂಡ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆ ಮೀರಿ ಬೆಳವಣೆಗೆ ಸಾಧಿಸಿದೆ. ಅದೇ ರೀತಿ ಸ್ಥಳೀಯ ಸಂಘ-ಸಂಸ್ಥೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ತಳಮಟ್ಟದಿಂದ ರಾಷ್ಟ್ರಮಟ್ಟದ ವರೆಗೆ ಬಿಜೆಪಿ ಆಡಳಿತ ಇರಬೇಕು. ಇದರಿಂದ ಅಭಿವೃದ್ಧಿಗೆ ಸಹಕಾರ ಸಿಗಲಿದೆ. ಸದಸ್ಯತ್ವ ಅಭಿಯಾನದ ಮುಖ್ಯಸ್ಥರು ಜಾಗೃತಿ ವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸದಸ್ಯತ್ವ ಮಾಡುವಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ ಮಾತನಾಡಿ, ಜು.6ರಿಂದ ಸದಸ್ಯತ್‌ ಅಭಿಯಾನ ಕಾರ್ಯಕ್ರಮ ಪ್ರಾರಂಭಗೊಂಡಿದೆ. ಇದು ಒಂದು ತಿಂಗಳ ವರೆಗೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ 50ರಿಂದ 80 ಸಾವಿರ ಸದಸ್ಯತ್ವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಬಿಜೆಪಿ ಯುವ ಮುಖಂಡ ಮಲ್ಲಣ್ಣ ಯಾದವಾಡ ಮತ್ತು ಮಹಾದೇವ ಚಿನ್ನಾಕಟ್ಟಿ, ಗೋಪಾಲ ಪಾತಾಳಿ ಸದಸ್ಯತ್ವ ಅಭಿಯಾನದ ಕುರಿತು ಮಾತನಾಡಿದರು. ಜಿಪಂ ಸದಸ್ಯರಾದ ರೇಣಪ್ಪ ಸೋಮಗೊಂಡ, ಮಾರುತಿ ತುಪ್ಪದ, ಶಿವಕ್ಕ ಬೆಳವಡಿ, ತಾಪಂ ಸದಸ್ಯ ಶಿವಪ್ಪ ಮೇಟಿ, ಎಪಿಎಂಸಿ ಸದಸ್ಯ ಮಾರುತಿ ಕೊಪ್ಪದ, ಎಸ್‌.ಜಿ. ಮಾಳವಾಡ, ರಾಜೇಶ, ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next