Advertisement
ಬದಲಿಗೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಉದ್ದೇಶದಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಎಂಎಲ್‌ಸಿ ಸಂದೇಶ್ ನಾಗರಾಜ್ ಕುಟುಂಬದವರು ಹಿಂದೊಂದು, ಮುಂದೊಂದು ಮಾತನಾಡುವುದನ್ನು ಬಿಡಬೇಕಿದೆ. ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿದ್ದು, ಅವರಿಂದ ಪಕ್ಷಕ್ಕೆ ಏನಾಗಿದೆ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದರು.
ಪರ್ಸಂಟೇಜ್ ನಿಸ್ಸೀಮರು: ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿರುವ ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪರ್ಸೆಂಟೇಜ್‌ನಲ್ಲಿ ನಿಸ್ಸೀಮರಾಗಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನನ್ನ ಆಡಳಿತದಲ್ಲಿದ್ದ ಪರ್ಸಂಟೇಜ್ ಎಷ್ಟು, ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪರ್ಸಂಟೇಜ್ ಇದೆ ಎಂಬುದು ಎಲ್ಲಾ ಗುತ್ತಿಗೆದಾರರಿಗೆ ತಿಳಿದಿದೆ.
Related Articles
ಸಿದ್ದು ಕೊಡುಗೆ ಏನಿಲ್ಲ:
Advertisement
ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆಯ ಬಗ್ಗೆ ಮಾತನಾಡಿ, ಬೆಂಗಳೂರು ನಗರವನ್ನು ಮೊದಲು ಹಾಳುಮಾಡಿದ್ದು ಬಿಜೆಪಿ. ನಂತರ ಅದಕ್ಕೆ ಸಿದ್ದರಾಮಯ್ಯ ಕೊಡುಗೆ ನೀಡಿದ್ದಾರೆ. ಕಳೆದ ಐದು ವರ್ಷದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏನನ್ನು ನೀಡಿಲ್ಲ.
ಬೆಂಗಳೂರು, ಮೈಸೂರು ಏನಾದರೂ ಅಭಿವೃದ್ಧಿಯಾಗಿದ್ದರೆ ಅದು ನನ್ನ ಅವಧಿಯಲ್ಲಿ. ಹೀಗಿದ್ದರೂ ರಾಜ್ಯ ಸರ್ಕಾರ ಅಭಿವೃದ್ಧಿ ಹೆಸರಿನಲ್ಲಿ ಅವರ ಜೇಬು ತುಂಬಿಸಿಕೊಳ್ಳುತ್ತಿದ್ದು, ಮೈಸೂರಿನ ಅಭಿವೃದ್ಧಿಗೂ ಸಿದ್ದರಾಮಯ್ಯ ಸರ್ಕಾರ ಯಾವುದೇ ಕೊಡುಗೆ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಬಹುಮತದ ಸರ್ಕಾರಕ್ಕೆ ಒತ್ತು: ಮುಂದಿನ ಚುನಾವಣೆಯಲ್ಲಿ ನಾನು ಮೈತ್ರಿ ಸರ್ಕಾರಕ್ಕಾಗಿ ಹೋರಾಡುತ್ತಿಲ್ಲ, ಬಹುಮತದ ಸರ್ಕಾರಕ್ಕೆ ಹೋರಾಡುತ್ತಿದ್ದೇನೆ. ಹೀಗಾಗಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ.
ಓವೈಸಿ ಪಕ್ಷದೊಂದಿಗೂ ಮೈತ್ರಿಯ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾರೊಂದಿಗೆ ಬೇಕಾದರೂ ಮಾತುಕತೆ ನಡೆಸುತ್ತೇನೆ. ರಾಜ್ಯದಲ್ಲಿ ಮುಂದೆ ಅಧಿಕಾರ ಬೇಕಾದರೆ ಹಾಗೂ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಜೆಡಿಎಸ್ ಕಾಲು ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.