Advertisement

“ಪಕ್ಷ ಸಂಘಟನೆ, ಬಲವರ್ಧನೆಗೆ ಹೆಚ್ಚು  ಗಮನ ಅಗತ್ಯ’

07:40 AM Jul 29, 2017 | Harsha Rao |

ಕುಂದಾಪುರ: ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮದ ಪ್ರತಿಯೊಂದು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಅರಿತುಕೊಂಡು, ಕೇಂದ್ರ ಸರಕಾರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಪಕ್ಷದ ಕಾರ್ಯಕರ್ತರು ಕೇಂದ್ರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದನ್ನು ಮರೆತರೆ ಜನರು ಅಪಪ್ರಚಾರಗಳಿಗೆ ಬಲಿಯಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹಿನ್ನಡೆಯಾಗುವ ಸಾಧ್ಯತೆಗಳಿವೆ ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಗುರುವಾರ ಸಂಜೆ ಜರಗಿದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಗಂಗೊಳ್ಳಿ ಸ್ಥಾನೀಯ ಸಮಿತಿ ಪದಾಧಿಕಾರಿಗಳ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸಂಘ ಪರಿವಾರದ, ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ವಿಶ್ರಾಂತಿ ಪಡೆದುಕೊಳ್ಳದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್‌ ಷಾ ಇಚ್ಛೆಯಂತೆ ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆ ಬಗ್ಗೆ ಕಾರ್ಯಕರ್ತರು ಹೆಚ್ಚಿನ ಸಮಯವನ್ನು ನೀಡಬೇಕು ಎಂದರು.
ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಅಧ್ಯಕ್ಷತೆ ವಹಿಸಿದ್ದರು. 

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ.ಸುಕುಮಾರ್‌ ಶೆಟ್ಟಿ ಅವರು ನೂತನ ಬೂತ್‌ ಸಮಿತಿ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರಿಗೆ ಗುರುತು ಚೀಟಿ ವಿತರಿಸಿ ಶುಭ ಹಾರೈಸಿದರು. 

ಬಿಜೆಪಿ ವಿಸ್ತಾರಕರಾದ ಬಿ.ಕಿಶೋರ್‌ ಕುಮಾರ್‌ ಕುಂದಾಪುರ ಮತ್ತು ರಾಜೇಶ ಕಾವೇರಿ ಬೂತ್‌ ಸಮಿತಿ ಸದಸ್ಯರ ಜವಾಬ್ದಾರಿ ಹಾಗೂ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

Advertisement

ಬಿಜೆಪಿ ಮುಖಂಡ ದೀಪಕಕುಮಾರ್‌ ಶೆಟ್ಟಿ, ತ್ರಾಸಿ ಶಕ್ತಿ ಕೇಂದ್ರದ ಅಧ್ಯಕ್ಷ ಶೇಖರ ದೇವಾಡಿಗ, ತಾಲೂಕು ಪಂಚಾಯತ್‌ ಸದಸ್ಯ ಸುರೇಂದ್ರ ಖಾರ್ವಿ, ಜಿಲ್ಲಾ ಪಂಚಾಯತ್‌ಸದಸ್ಯೆ ಶೋಭಾ ಜಿ.ಪುತ್ರನ್‌, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೆ„, ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ, ಬಿಜೆಪಿ ಮುಖಂಡರಾದ ರಾಮಪ್ಪ ಖಾರ್ವಿ, ಉಮಾನಾಥ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಜಯರಾಮ ದೇವಾಡಿಗ ಸ್ವಾಗತಿಸಿದರು. ಅಶೋಕ್‌ ಎನ್‌.ಡಿ. ಕಾರ್ಯ ಕ್ರಮ ನಿರೂಪಿಸಿ, ಕಾರ್ಯದರ್ಶಿ ಬಿ.ಗಣೇಶ ಶೆಣೆ„ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next