Advertisement
ಪಾರ್ವತಮ್ಮ ರಾಜ್‌ಕುಮಾರ್ ಅವರ ಆರೋಗ್ಯ ಸುಧಾರಣೆಗೆ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದೇವೆ. ಉಸಿರಾಟದ ತೊಂದರೆ ಇರುವುದರಿಂದ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಸದ್ಯ ಡಯಾಲಿಸಿಸ್ ನಿಲ್ಲಿಸಿದ್ದೇವೆ. ಅಗತ್ಯ ಬಿದ್ದರೆ ಡಯಾಲಿಸಿಸ್ ಮಾಡಲಾಗುವುದು. ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ವೈದ್ಯರಾದ ಡಾ.ನರೇಶ್ ಶೆಟ್ಟಿ ಹಾಗೂ ಡಾ.ಸಂಜಯ… ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಂದುವರಿಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಅಮ್ಮ ನಿನ್ನೆ ಹೇಗಿದ್ದರೋ ಇಂದೂ ಹಾಗೆಯೇ ಇದ್ದಾರೆ. ಈಗಲೂ ಪ್ರತಿದಿನ ಅಮ್ಮನ ಆರೋಗ್ಯದ ಮಾಹಿತಿ ನೀಡುತ್ತಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ’ ಎಂದು ಮನವಿ ಮಾಡಿದರು.