Advertisement

ಪಾರ್ವತಮ್ಮನವರ ಆರೋಗ್ಯ ಕೊಂಚ ಚೇತರಿಕೆ

12:24 PM May 24, 2017 | Team Udayavani |

ಬೆಂಗಳೂರು: ಬಹು ಅಂಗಾಂಗ ವೈಫ‌ಲ್ಯ ಹಾಗೂ ಉಸಿರಾಟದ ತೊಂದರೆಯಿಂದ ನಗರದ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ನಿರ್ಮಾಪಕಿ ಡಾ. ಪಾರ್ವತಮ್ಮ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದೆ. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿನ ಚೇತರಿಕೆ ಕಾಣುತ್ತಿದೆ. ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಂಜ್ಞೆಯ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ.

Advertisement

ಉಸಿರಾಟದ ಸಮಸ್ಯೆಯಿಂದ ಸಂಪೂರ್ಣವಾಗಿ ಹೊರಬರುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮಂಗಳವಾರ ಕನ್ನಡ ಚಿತ್ರರಂಗದ ಪ್ರಮುಖರಾದ ಉಪೇಂದ್ರ, ಮಾಲಾಶ್ರೀ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ, ಪಾರ್ವತಮ್ಮನವರ ಆರೋಗ್ಯ ವಿಚಾರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next