Advertisement

12ನೇ ದಿನಕ್ಕೆ ಕಾಲಿಟ್ಟ ಪಾರ್ವತಿ ಧರಣಿ

12:15 PM May 09, 2022 | Team Udayavani |

ಆಳಂದ: ಸಿಡಿಪಿಒ ಅಮಾನತು ಕೈಗೊಳ್ಳಬೇಕು. ಅಕ್ರಮ ಮದ್ಯ ಮಾರಾಟ ತಡೆ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕಿನ ಬೆಳಮಗಿ ಗ್ರಾಮ ಪಂಚಾಯಿತಿ ಸದಸ್ಯೆ ಪಾರ್ವತಿ ಅಂಬರಾಯ ಗ್ರಾಪಂ ಕಚೇರಿ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ರವಿವಾರ 12ನೇ ದಿನಕ್ಕೆ ಕಾಲಿಟ್ಟಿದೆ.

Advertisement

ಈಗಾಗಲೇ ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಡಾ| ಸಂಜಯ ರೆಡ್ಡಿ ತಮ್ಮ ವ್ಯಾಪ್ತಿಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಸಿಡಿಪಿಒ ಶಿವಮೂರ್ತಿ ಕುಂಬಾರ ಮತ್ತು ಇತರರ ವಿರುದ್ಧ ಅವ್ಯವಹಾರ, ಹಲ್ಲೆ, ಬೆದರಿಕೆಗೆ ಪ್ರಚೋದನೆ ನೀಡಿದ್ದಕ್ಕೆ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕಾನೂನು ಶಿಸ್ತು ಕ್ರಮ ಜರುಗಿಸಬೇಕು. ಸ್ಥಳಕ್ಕೆ ಸಂಬಂಧಿತ ಜಿಲ್ಲಾ ಮಟ್ಟದ ಮೇಲಧಿಕಾರಿಗಳು ಬಂದು ಭರವಸೆ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಆರಂಭಿಸಿದ ಧರಣಿ ಸತ್ಯಾಗ್ರಹಕ್ಕೆ ಗ್ರಾಮದಲ್ಲಿನ ಮಹಿಳೆಯರು ಭಾಗವಹಿಸಿ ಬೆಂಬಲ ಸೂಚಿಸುತ್ತಿದ್ದಾರೆ. ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟ ತಡೆಯಬೇಕು. ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ದಲಿತ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಎಂದು ಬೇಡಿಕೆ ಮುಂದಿಟ್ಟು ಧರಣಿ ನಡೆಸಲಾಗುತ್ತಿದೆ. ಅಂಗನವಾಡಿಗಳಲ್ಲಿ ಭ್ರಷ್ಟಾಚಾರಕ್ಕೆ ಸಾಥ್‌ ನೀಡಿದ ಅಧಿಕಾರಿಯನ್ನು ಅಮಾನತು ಮಾಡಬೇಕು. ಅಕ್ರಮ ಸಾರಾಯಿ ಮಾರಾಟ ತಡೆಯಾಗುವ ತನಕ ಧರಣಿ ಕೈಬಿಡುವುದಿಲ್ಲ ಸಂಬಂಧಿತ ಮೇಲಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಳ್ಳುವ ವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಪಾರ್ವತಿ ಅಂಬರಾಯ ಪಟ್ಟು ಹಿಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next