Advertisement

ಶ್ರೀಕೃಷ್ಣ ಮಠದ ಪರ್ಯಾಯ ಆಮಂತ್ರಣ ಪತ್ರಿಕೆ : ಸಿಎಂ ಬಿಡುಗಡೆ

12:34 AM Jan 07, 2022 | Team Udayavani |

ಉಡುಪಿ : ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿದರು.

Advertisement

ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಕೆ.ರಘುಪತಿ ಭಟ್‌ ಅವರು ಪರ್ಯಾಯೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಿದರು.

ಸಮಿತಿಯ ನಿಯೋಗದೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಪರ್ಯಾಯ ಉತ್ಸವ ಸುಗಮವಾಗಿ ನಡೆಯಲು ಅನುಕೂಲ ಕಲ್ಪಿಸಲು ಜಿಲ್ಲಾಧಿಕಾರಿಯವರಿಗೆ ತಿಳಿಸುವುದಾಗಿ ಹೇಳಿದರು.
ಸಚಿವರಾದ ಗೋವಿಂದ ಎಂ. ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್‌ ಸದಸ್ಯರಾದ ರವಿಕುಮಾರ್‌, ಭಾರತಿ ಶೆಟ್ಟಿ, ಸಮಿತಿ ಪದಾಧಿಕಾರಿಗಳಾದ ಶ್ರೀಪತಿ ಭಟ್‌ ಉಚ್ಚಿಲ, ವಿಷ್ಣುಪ್ರಸಾದ್‌ ಪಾಡಿಗಾರ್‌, ಜಯಪ್ರಕಾಶ ಕೆದ್ಲಾಯ ಮೊದಲಾದವರು ಉಪಸ್ಥಿತರಿದ್ದರು. ನಿಯೋಗವು ವಿಧಾನಸಭೆಯ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಆಹ್ವಾನಿಸಿತು.

ಪ್ರಮುಖ ಬದಲಾವಣೆಗಳು
– ಜ.11ರಿಂದ 14ರ ವರೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಜ. 15ರ ಹೊರೆಕಾಣಿಕೆ ಸಮರ್ಪಣೆಯನ್ನು ಜ. 14ಕ್ಕೆ ಮತ್ತು ಜ. 16ರ ಹೊರೆಕಾಣಿಕೆ ಸಮರ್ಪಣೆಯನ್ನು ಜ. 17ಕ್ಕೆ ಬದಲಾಯಿಸಲಾಗಿದೆ.
– ಜ. 10ರಿಂದ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಜ. 14ರಿಂದ 16 ರ ವರೆಗಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

– ಪರ್ಯಾಯ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳಿಗೋಸ್ಕರ ಜ. 17-18ರಂದು ರಿಯಾಯಿತಿ ಕೋರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next