Advertisement
ವಿಧಾನಸೌಧದಲ್ಲಿ ಪಶು ಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ “ಪಶು ಸಂಜೀವಿನಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನವು ರೈತರ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಸೇವೆಯನ್ನು ವಿಸ್ತರಿಸಲಾಗುವುದು. ಕರ್ನಾಟಕದಲ್ಲಿ ಮೊತ್ತಮೊದಲ ಬಾರಿಗೆ ಇಂಥದ್ದೊಂದು ಸೇವೆ ಆರಂಭವಾಗುತ್ತಿದೆ ಎಂದು ಹೇಳಿದರು. ಪಶು ಸಂಗೋಪನ ಸಚಿವ ಪ್ರಭು ಚೌಹಾಣ್ ಸಹಿತ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಸಾರಿಗೆ ಇಲಾಖೆಯು ಒಂದು ವರ್ಷದಲ್ಲಿ ಜಾರಿಗೊಳಿಸಿದ ಕಾರ್ಯಕ್ರಮ ಗಳು, ಕೋವಿಡ್-19ರ ಪಿಡುಗಿನ ನಡುವೆಯೂ ಸುರಕ್ಷಿತ ಸಾರಿಗೆ ಸೇವೆ ಒದಗಿಸುತ್ತಿರುವ ಇಲಾಖೆ ಸಾಧನೆಯ ಮಾಹಿತಿ ಒಳಗೊಂಡ “ಸಾರಿಗೆ ಮಿತ್ರ’ ಕೈಪಿಡಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನ ಸೌಧದ ಸಮ್ಮೇಳನ ಸಭಾಂ ಗಣದಲ್ಲಿ ಗುರುವಾರ ಬಿಡುಗಡೆ ಗೊಳಿಸಿದರು. ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.