Advertisement
ಕಲಾಪ ಆರಂಭವಾಗುತ್ತಿದ್ದಂತೆ ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಬಾವಿಗಿಳಿದು ಧರಣಿ ನಡೆಸಿದ ವಿಪಕ್ಷಗಳ ಸದಸ್ಯರು, ಈಗಾಗಲೇ ಅಹೋರಾತ್ರಿ ಧರಣಿ ನಡೆಸಿದ್ದೇವೆ. ಒಂದು ದಿನದ ಹಿಂದೆಯೇ ಮರುಪರಿಶೀಲನೆ ಅರ್ಜಿ ಸಲ್ಲಿಸಲಾಗಿತ್ತು. ಅದರ ಪರಿಶೀಲನೆಗೆ ಸಾಕಷ್ಟು ಸಮಯಾವಕಾಶವನ್ನೂ ತೆಗೆದುಕೊಂಡಿದ್ದೀರಿ. ಈಗಲಾದರೂ ಅವಕಾಶ ಕಲ್ಪಿಸಬೇಕು ಎಂದು ಸಭಾಪತಿಗಳಿಗೆ ಮನವಿ ಮಾಡಿದರು.
Related Articles
Advertisement
ಕೇವಲ ಅರ್ಧಗಂಟೆಯಲ್ಲಿ ಅಂಗೀಕಾರಕೇವಲ ಅರ್ಧಗಂಟೆಯಲ್ಲಿ 5 ಮಸೂದೆಗಳು ಮತ್ತು 2 ನಿರ್ಣಯಗಳ ಮಂಡನೆ ಜತೆಗೆ ಅಂಗೀಕಾರಗೊಂಡವು. ಅಷ್ಟೇ ಅಲ್ಲ, ವರದಿ ಮತ್ತು ಕಾಗದಪತ್ರಗಳನ್ನು ಇದೇ ಅವಧಿಯಲ್ಲಿ ಮಂಡಿಸಲಾಯಿತು. ಈ ಪೈಕಿ ಕರ್ನಾಟಕ ಧನವಿನಿಯೋಗ (ಸಂಖ್ಯೆ-4) ಮಸೂದೆ -2024, ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ, ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ದಿ) ಮಸೂದೆ, ಸರಕು-ಸೇವೆಗಳ ಮಸೂದೆಗಳು ಚರ್ಚೆ ಇಲ್ಲದೆ ಅಂಗೀಕಾರಗೊಂಡವು. 2026ರಲ್ಲಿನ ಅಥವಾ ಅದರ ಅನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ನಡೆಸಬಾರದು. 1971ರ ಜನಗಣತಿ ಆಧರಿಸಿ ನಿರ್ಧರಿಸಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು. ಜತೆಗೆ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯ ಉಂಟುಮಾಡಲಿದೆ. ಹಾಗಾಗಿ ಈ ನೀತಿಯನ್ನು ಅನುಷ್ಠಾನಗೊಳಿಸಬಾರದು ಎಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು.