Advertisement
ವಿಧಾನ ಪರಿಷತ್ತಿನಲ್ಲಿ ಇದಕ್ಕೆ ಅನುಮೋದನೆ ದೊರೆತು ರಾಜ್ಯಪಾಲರ ಅಂಕಿತ ಬಿದ್ದ ಬಳಿಕ ಕಾನೂನಾಗಿ ಜಾರಿಗೊಳ್ಳಲಿದೆ. ರಾಜ್ಯ ಸರಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕ್, ಇತರೆ ಹಣಕಾಸು ಸಂಸ್ಥೆಗಳು, ಸರಕಾರದಿಂದ ಅನುಮತಿ ಪಡೆದ ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾನಿಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಮಸೂದೆ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಬಹುರಾಷ್ಟ್ರೀಯ ಕಂಪೆನಿಗಳು, ಮಾಲ್‌ಗಳು ಕಾನೂನು ಪಾಲನೆ ಮಾಡುತ್ತವೆಯೇ ಎನ್ನುವ ಪ್ರಶ್ನೆ ಇದೆ. ಅವರು ನೋಟಿಸ್, ನ್ಯಾಯಾಲಯಗಳಿಗೂ ಹೆದರುವುದಿಲ್ಲ. ಸ್ಥಳದಲ್ಲೇ ದಂಡ ವಿಧಿಸುವ ಕಾನೂನು ತರಬೇಕು ಎಂದು ಆಗ್ರಹಿಸಿದರು.
ನಿಯಮ ರಚಿಸುವಾಗ ದಂಡ ವಿಧಿಸುವ ಹಾಗೂ ಪರವಾನಿಗೆ ರದ್ದುಪಡಿಸುವ ಅಂಶಗಳನ್ನೂ ಸೇರಿಸುವುದಾಗಿ ಸಚಿವ ತಂಗಡಗಿ ಭರವಸೆ ನೀಡಿದರು.