ವಿಧಾನ ಪರಿಷತ್ತು: ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ)ವಿಧೇಯಕ-2022 ಚರ್ಚೆಯಿಲ್ಲದೆ ಅಂಗೀಕಾರವಾಗಿದ್ದಕ್ಕೆ ಜೆಡಿಎಸ್‌ನ ಮರಿತಿಬ್ಬೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ಗುರುವಾರ ನಡೆಯಿತು.
ಮಧ್ಯಾಹ್ನ ಕಲಾಪವಾಗುತ್ತಿದ್ದಂತೆ ಸಭಾಧ್ಯಕ್ಷರು , ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ( ತಿದ್ದುಪಡಿ)ವಿಧೇಯಕ-2022 ಅಂಗೀಕರವಾಗಿದೆ ಎಂದು ಘೋಷಣೆ ಮಾಡಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮರಿತಿಬ್ಬೇಗೌಡ, ಶಿಕ್ಷಣ ಕ್ಷೇತ್ರಕ್ಕೆ ಪೂರಕವಾಗಿರುವ ಈ ವಿಚಾರನ್ನು ಸದನದಲ್ಲಿ ಚರ್ಚೆ ಮಾಡದೇ ಅಂಗೀಕರಾಗಿ ಮಾಡಿರುವ ಕ್ರಮ ಸರಿಯಲ್ಲ ಎಂದರು.
ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಭಾಧ್ಯಕ್ಷ ರಘುನಾಥ್ ರಾವ್ ಮಲ್ಕಾಪೂರೆ, ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಚರ್ಚೆ ನಡೆಯಲಿಲ್ಲ. ಚರ್ಚೆಸಲು ಇನ್ನೂ ಹಲವು ವಿಷಯಗಳು ಇವೆ.ಹೀಗಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ( ತಿದ್ದುಪಡಿ)ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ಅಂಗೀಕರ ಮಾಡಲಾಗಿದೆ ಎಂದು ಹೇಳಿದರು.
ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಮರಿತಿಬ್ಬೇಗೌಡ, ಇದು ರಾಜ್ಯ ವಿಶ್ವವಿದ್ಯಾನಿಲಯಗಳ ಸಂಬಂಧಿಸದ ವಿಷಯವಾಗಿತ್ತು. ಇಂತಹ ಗಂಭೀರ ವಿಚಾರ ಸದನಲ್ಲಿ ಚರ್ಚೆ ಆಗದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಚರ್ಚೆ ಅವಕಾಶ ನೀಡದ ಸಭಾಪತಿಗಳು, ಅತಿವೃಷ್ಟಿ ಚರ್ಚೆಯನ್ನು ಕೈಗೆತ್ತಿಕೊಂಡರು.