Advertisement

ಚರ್ಚೆ ಇಲ್ಲದೆ  ವಿಧೇಯಕ ಅಂಗೀಕಾರ

08:35 PM Sep 22, 2022 | Team Udayavani |

ವಿಧಾನ ಪರಿಷತ್ತು: ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ)ವಿಧೇಯಕ-2022 ಚರ್ಚೆಯಿಲ್ಲದೆ ಅಂಗೀಕಾರವಾಗಿದ್ದಕ್ಕೆ ಜೆಡಿಎಸ್‌ನ ಮರಿತಿಬ್ಬೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ಗುರುವಾರ ನಡೆಯಿತು.

Advertisement

ಮಧ್ಯಾಹ್ನ ಕಲಾಪವಾಗುತ್ತಿದ್ದಂತೆ ಸಭಾಧ್ಯಕ್ಷರು , ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ( ತಿದ್ದುಪಡಿ)ವಿಧೇಯಕ-2022 ಅಂಗೀಕರವಾಗಿದೆ ಎಂದು ಘೋಷಣೆ ಮಾಡಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮರಿತಿಬ್ಬೇಗೌಡ, ಶಿಕ್ಷಣ ಕ್ಷೇತ್ರಕ್ಕೆ ಪೂರಕವಾಗಿರುವ ಈ ವಿಚಾರನ್ನು ಸದನದಲ್ಲಿ ಚರ್ಚೆ ಮಾಡದೇ ಅಂಗೀಕರಾಗಿ ಮಾಡಿರುವ ಕ್ರಮ ಸರಿಯಲ್ಲ ಎಂದರು.

ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಭಾಧ್ಯಕ್ಷ ರಘುನಾಥ್‌ ರಾವ್‌ ಮಲ್ಕಾಪೂರೆ, ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಚರ್ಚೆ ನಡೆಯಲಿಲ್ಲ. ಚರ್ಚೆಸಲು ಇನ್ನೂ ಹಲವು ವಿಷಯಗಳು ಇವೆ.ಹೀಗಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ( ತಿದ್ದುಪಡಿ)ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ಅಂಗೀಕರ ಮಾಡಲಾಗಿದೆ ಎಂದು ಹೇಳಿದರು.

ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಮರಿತಿಬ್ಬೇಗೌಡ, ಇದು ರಾಜ್ಯ ವಿಶ್ವವಿದ್ಯಾನಿಲಯಗಳ ಸಂಬಂಧಿಸದ ವಿಷಯವಾಗಿತ್ತು. ಇಂತಹ ಗಂಭೀರ ವಿಚಾರ ಸದನಲ್ಲಿ ಚರ್ಚೆ ಆಗದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಚರ್ಚೆ ಅವಕಾಶ ನೀಡದ ಸಭಾಪತಿಗಳು, ಅತಿವೃಷ್ಟಿ ಚರ್ಚೆಯನ್ನು ಕೈಗೆತ್ತಿಕೊಂಡರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next