ಚೆನ್ನೈ: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಘಟನೆ ಬುಧವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.
ಮಂಗಳವಾರ ರಾತ್ರಿ ದೆಹಲಿಯಿಂದ ಹೊರಟಿದ್ದ ಇಂಡಿಗೋ 6E 6341 ವಿಮಾನದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಣಿಕಂದನ್ ಎಂದು ಗುರುತಿಸಲಾಗಿದ್ದ ವ್ಯಕ್ತಿಯೇ ವಿಮಾನದ ಬಾಗಿಲು ಓಪನ್ ಮಾಡಲು ಯತ್ನಿಸಿದ್ದು ವಿಮಾನ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್) ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ವ್ಯಕ್ತಿಯ ವರ್ತನೆ ಕುರಿತು ಇಂಡಿಗೋ ಅಧಿಕಾರಿಗಳು ದೂರು ದಾಖಲಿಸಿದ್ದು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Women’s Reservation Bill: ತಡೆ ಇಲ್ಲದೇ ಮಹಿಳಾ ಮೀಸಲಾತಿ ಮಸೂದೆ ಪಾಸಾಗಲಿ