Advertisement

Ramanagar: ಬಸ್ಸಿಗಾಗಿ ಕಾದು ಕಾದು ಸುಸ್ತಾದ ಪ್ರಯಾಣಿಕರು… ರಸ್ತೆ ತಡೆದು ಪ್ರತಿಭಟನೆ

10:11 AM Jan 18, 2024 | Team Udayavani |

ರಾಮನಗರ: ರಾಮನಗರದಿಂದ ಬೆಂಗಳೂರಿಗೆ ಹೋಗಲು ಸಮರ್ಪಕ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ವಿಲ್ಲ ಎಂದು ಗರಂ ಆದ ೫೦೦ಕ್ಕೂ ಹೆಚ್ಚು ಪ್ರಯಾಣಿಕರಿಂದ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

Advertisement

ರಾಮನಗರ ಕೆಎಸ್ ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಬೆಳಿಗ್ಗೆ ೭ ಗಂಟೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸಲು ಕಾದು ನಿಂತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಕುಪಿತ ಗೊಂಡು ಬಸ್ ಗಳನ್ನು ಅಡ್ಡಗಟ್ಟಿ ಪ್ರತಿಭಟಿಸಿದರು.

ಪ್ರತಿನಿತ್ಯ ಇದೇ ಸಮಸ್ಯೆಯಾಗಿದ್ದು, ರಾಮನಗರಕ್ಕೆ ಮೈಸೂರು ಕಡೆಯಿಂದ ಬರುವ ಬಸ್ಸುಗಳು ಕಿಕ್ಕಿರಿದು ತುಂಬಿದ್ದು ರಾಮನಗರದಲ್ಲಿ ಬಸ್ಸು ಹತ್ತಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಗೊಂಡಿದೆ. ಸಾರಿಗೆ ಇಲಾಖೆ ಅಧಿಕಾರಿಗಳು ಹಲವಾರು ಬಾರಿ ಮನವಿ ಮಾಡಿದರೂ ಗಮನಹರಿಸದ ಅಧಿಕಾರಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ. ಶಕ್ತಿ ಯೋಜನೆ ಜಾರಿಗೆ ತಂದ ಬಳಿಕ ಬಸ್ ಗಳ ಸಂಖ್ಯೆ ಕಡಿಮೆಯಾಗಿದ್ದು ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಆರೋಪಿಸಿದ್ದಾರೆ.

ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪ್ರಯಾಣಿಕರನ್ನು ಸಮಾಧಾನ ಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇದನ್ನೂ ಓದಿ: IndiGo fined: ರನ್‌ವೇಯಲ್ಲೇ ಪ್ರಯಾಣಿಕರಿಂದ ಆಹಾರ ಸೇವನೆ, ಇಂಡಿಗೋಗೆ ಬಿತ್ತು 1.2 ಕೋಟಿ ದಂಡ

Advertisement
Advertisement

Udayavani is now on Telegram. Click here to join our channel and stay updated with the latest news.

Next