Advertisement

ಹೊಸದಿಲ್ಲಿ: ವಿಮಾನದಲ್ಲಿ ಹೊತ್ತಿ ಉರಿದ ಪ್ರಯಾಣಿಕನ ಮೊಬೈಲ್ ಫೋನು!

01:30 PM Apr 15, 2022 | Team Udayavani |

ಹೊಸದಿಲ್ಲಿ: ದಿಬ್ರುಗಢ-ದೆಹಲಿ ನಡುವೆ ಸಾಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕ್ಯಾಬಿನ್ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿ ನಂದಿಸಿದ್ದಾರೆ ಎಂದು ವಾಯುಯಾನ ನಿಯಂತ್ರಕ ಡಿಜಿಸಿಎ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಈ ಘಟನೆಯಿಂದಾಗಿ ಯಾವುದೇ ಪ್ರಯಾಣಿಕರಿಗೆ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.

6ಇ 2037 ವಿಮಾನ ಅಸ್ಸಾಂನ ದಿಬ್ರುಗಢ್‌ನಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಫೋನ್‌ ನಿಂದ ಬೆಂಕಿ ಕಿಡಿ ಮತ್ತು ಹೊಗೆ ಹೊರಬರುವುದನ್ನು ಕಂಡಿದ್ದಾರೆ. ನಂತರ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿಯನ್ನು ನಂದಿಸಿದರು ಎಂದು ಅಧಿಕಾರಿಗಳು ಹೇಳಿದರು.

ವಿಮಾನವು ಗುರುವಾರ ಮಧ್ಯಾಹ್ನ 12.45 ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಪಕ್ಷಕ್ಕೆ ಮುಜುಗರ ಆಗಬಾರದೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ: ಈಶ್ವರಪ್ಪ

Advertisement

“ದಿಬ್ರುಗಢ್‌ನಿಂದ ದೆಹಲಿಗೆ ಬರುತ್ತಿದ್ದ 6ಇ 2037 ವಿಮಾನದಲ್ಲಿ ಮೊಬೈಲ್ ಸಾಧನದ ಬ್ಯಾಟರಿ ಅಸಹಜವಾಗಿ ಬಿಸಿಯಾದ ಕಾರಣದಿಂದ ಈ ಘಟನೆ ಸಂಭವಿಸಿದೆ. ಎಲ್ಲಾ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಮತ್ತು ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿರ್ವಹಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ” ಎಂದು ಇಂಡಿಗೋ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next