Advertisement
ನಾ.ಡಿಸೋಜಾ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತ ನಾ.ಡಿಸೋಜಾ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯ ಅಗಲಿದ್ದಾರೆ. ಸಾಗರದ ನಗರಸಭೆ ಆವರಣದಲ್ಲಿರುವ ಗಾಂಧಿ ಮೈದಾನದಲ್ಲಿ ಡಿಸೋಜಾ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜ.7ರಂದು ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ನಾ.ಡಿಸೋಜಾ ರವಿವಾರ (05.01.2025) ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು. – ಇಂತಿ ಅವರ ಕುಟುಂಬ