Advertisement

ಜೀವನದ ಪರೀಕ್ಷೆಯಲ್ಲಿ ಪಾಸಾಗುವುದು ಮುಖ್ಯ

12:45 PM May 20, 2017 | Team Udayavani |

ಮೈಸೂರು: ಜೀವನದಲ್ಲಿ ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದೇ ಮುಖ್ಯವಲ್ಲ. ಅದರಾಚೆಗೂ ಜೀವನದ ಪರೀಕ್ಷೆಗಳಿವೆ ಎಂದು ಕರ್ನಾಟಕ ಪೊಲೀಸ್‌ ಅಕಾಡೆಮಿ ಉಪನಿರ್ದೇಶಕಿ ಧರಣಿದೇವಿ ಮಾಲಗತ್ತಿ ಹೇಳಿದರು.

Advertisement

ಅಖೀಲ ಭಾರತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹಿತರಕ್ಷಣಾ ವೇದಿಕೆ ಶುಕ್ರವಾರ ಏರ್ಪಡಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ಬೋಧನಾ ತರಗತಿಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗುವುದೇ ಜೀವನದಲ್ಲಿ ಮುಖ್ಯ ಎಂದು ಭಾವಿಸಬಾರದು. ಜೀವನದ ಪರೀಕ್ಷೆಗಳಲ್ಲಿ ಪಾಸಾಗುವುದೇ ಮುಖ್ಯ ಹಾಗೂ ಪರಮೋತ್ಛ. ಹದಿಹರೆಯದ ಮನಸ್ಸನ್ನು ನಿಯಂತಣದಲ್ಲಿರಿಸಿಕೊಂಡು ಓದಿನ ಕಡೆಗೆ ಗಮನಹರಿಸಿದರೆ ಆಗದಿರುವ ಕೆಲಸವೆನಿಲ್ಲಾ ಮನಸ್ಸಿನಿಂದ ಮಾಡಬಹುದಾದ ಕೆಲಸಗಳು ಯಾವಾಗಲೂ ದಾರಿದೀಪವಾಗಲಿದೆ ಎಂದರು.

ಏಕಾಗ್ರತೆ ಇಲ್ಲದಿರುವುದು ಕೂಡ ಅನುತ್ತೀರ್ಣರಾಗಲು ಪ್ರಮುಖ ಕಾರಣಗಳಲ್ಲಿ ಒಂದು. ಪಿಯುಸಿ ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಬೇರೆಡೆ ಹರಿಬಿಡದೆ ಶ್ರಮಪಟ್ಟು ಓದಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಎದೆಗುಂದುವ ಅವಶ್ಯಕತೆ ಇಲ್ಲ. ನಿಮಗಾಗಿಯೇ ಆಯೋಜಿಸಿರುವ ವಿಶೇಷ ತರಗತಿಗಳ ಪ್ರಯೋಜನ ಪಡೆದುಕೊಂಡು ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆಯುವ ಮೂಲಕ ಸಾಧನೆ ಮಾಡಿ ಎಂದು ಸಲಹೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಪ್ರಕಾಶ್‌, ಸಂಘದ ರಾಜಾÂಧ್ಯಕ್ಷ ಕಾಟ್ನೂರು ಶಿವೇಗೌಡ, ಕಾರ್ಯದರ್ಶಿ ಎಂ.ಎಂ.ಮಹದೇವ, ಪ್ರಾಂಶುಪಾಲರಾದ ಆರ್‌.ವೈದ್ಯರಾಣಿ ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next