Advertisement
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಭರತ್ ಕುಮಾರ್ ಕುತಾಟಿ, ಸಾರ್ವಜನಿಕರಿಗೆ ಸುಗಮವಾಗಿ ಮತ್ತು ಸಕಾಲಕ್ಕೆ ಪಾಸ್ ಪೋರ್ಟ್ ಸೇವೆ ಹಾಗೂ ಸೌಲಭ್ಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಆ ಪೈಕಿ ಪೊಲೀಸ್ ಪರಿಶೀಲನೆ ಪೂರ್ವ ಪಾಸ್‌ಪೋರ್ಟ್ ವಿತರಣೆಯೂ ಒಂದು ಎಂದರು.
Related Articles
Advertisement
ಅದಾಗ್ಯೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು. ನಿಯಮಾವಳಿ ಪ್ರಕಾರ 21 ದಿನಗಳಲ್ಲಿ ಪೊಲೀಸ್ ಪರಿಶೀಲನೆ ಕಾರ್ಯ ಪೂರ್ಣಗೊಳಿಸಬೇಕು.
ಬೆಂಗಳೂರಿನಲ್ಲಿ ಕೇವಲ 11 ದಿನಗಳಲ್ಲಿ ಈ ಕಾರ್ಯ ಮುಗಿಯುತ್ತಿದೆ. ಶೇ. 97ರಷ್ಟು ಪ್ರಕರಣಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಗೊಳ್ಳುತ್ತಿವೆ. ಆದರೆ,ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ದಾವಣಗೆರೆ, ಹುಬ್ಬಳ್ಳಿ, ಹಾವೇರಿ, ಕೋಲಾರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪೊಲೀಸ್ ಪರಿಶೀಲನೆ ಕಾರ್ಯ ನಿಧಾನಗತಿಯಲ್ಲಿ ಆಗುತ್ತಿದ್ದು, ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಕೊಡಿಸಲಾಗುವುದು ಎಂದರು.
2017-18ನೇ ಸಾಲಿನಲ್ಲಿ 7.21 ಲಕ್ಷ ಪಾಸ್ ಪೋರ್ಟ್‌ಗಳನ್ನು ವಿತರಿಸಲಾಗಿದೆ. 5 ಪಾಸ್‌ಪೋರ್ಟ್ ಸೇವಾ ಕೇಂದ್ರಗಳು, 12 ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಇದೇ ವೇಳೆ ಭರತ್‌ಕುಮಾರ್ ತಿಳಿಸಿದರು.