ಸಿಡ್ನಿ: ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರ ತಾಯಿ ಮಾರಿಯಾ ಕಮಿನ್ಸ್ ದೀರ್ಘಕಾಲದ ಅನಾರೋಗ್ಯದಿಂದ ಶುಕ್ರವಾರ ( ಮಾ.10 ರಂದು) ಸಿಡ್ನಿಯಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ಸಮಯದ ಹಿಂದೆ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆ ಬಳಿಕ ಅದರಿಂದ ಗುಣಮುಖರಾಗಿ ಕುಟುಂಬದೊಂದಿಗೆ ಇದ್ದ ಅವರಿಗೆ ಮತ್ತೆ ಅನಾರೋಗ್ಯ ಕಾಡಿತ್ತು. ದೀರ್ಘಕಾಲದಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯ ಟ್ವೀಟ್ ಮಾಡಿದ್ದು, ಪ್ಯಾಟ್ ಕಮಿನ್ಸ್ ಅವರ ತಾಯಿಯ ನಿಧನಕ್ಕೆ ನಾವು ಸಂತಾಪ ಸೂಚಿಸುತ್ತೇವೆ. ಮಾರಿಯಾ ಅವರಿಗೆ ಗೌರವ ಸಲ್ಲಿಸಲು ಆಸ್ಟ್ರೇಲಿಯಾ ಕ್ರಿಕೆಟರ್ಸ್ ಇಂದು ಕಪ್ಪು ತೋಳುಪಟ್ಟಿಗಳನ್ನು ಧರಿಸಿ ಮೈದಾನಕ್ಕಿಳಿಯಲಿದೆ ಎಂದು ಹೇಳಿದೆ.
ದಿಲ್ಲಿ ಟೆಸ್ಟ್ ಬಳಿಕ ಆಸೀಸ್ ನಾಯಕ ಕಮಿನ್ಸ್ ತಮ್ಮ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಲು ಊರಿಗೆ ತಲುಪಿದ್ದರು.
Related Articles