Advertisement

ಬಾರ್ಡರ್- ಗಾವಸ್ಕರ್ ಟ್ರೋಫಿ; ಮೂರನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಆಸೀಸ್ ಕ್ಯಾಪ್ಟನ್!

12:46 PM Feb 24, 2023 | Team Udayavani |

ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ – ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಇಂಧೋರ್ ನಲ್ಲಿ ಮಾರ್ಚ್ 1ರಿಂದ ನಡೆಯಲಿದೆ. ಮೊದಲೇ ಗಾಯಾಳುಗಳ ತೊಂದರೆ ಅನುಭವಿಸುತ್ತಿರುವ ಆಸೀಸ್ ತಂಡದ ನಾಯಕನೇ ಇಂಧೋರ್ ಪಂದ್ಯದಿಂದ ಹೊರಬಿದ್ದಿದ್ದಾನೆ.

Advertisement

ಎರಡನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಕಮಿನ್ಸ್ ಅವರು ಕೌಟುಂಬಿಕ ಕಾರಣದಿಂದ ಸಿಡ್ನಿಗೆ ಮರಳಿದ್ದರು. ತಾಯಿಯ ಅನಾರೋಗ್ಯದ ಕಾರಣದಿಂದ ಕಮಿನ್ಸ್ ಅವರಿನ್ನೂ ಸಿಡ್ನಿಯಲ್ಲೇ ಇದ್ದಾರೆ. ಹೀಗಾಗಿ ಮೂರನೇ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಹೇಳಿದ್ದಾರೆ.

“ಈ ಸಮಯದಲ್ಲಿ ಭಾರತಕ್ಕೆ ಮರಳದಿರಲು ನಾನು ನಿರ್ಧರಿಸಿದ್ದೇನೆ. ನನ್ನ ಕುಟುಂಬದೊಂದಿಗೆ ನಾನು ಇಲ್ಲಿರಬೇಕಿದೆ” ಎಂದು ಕಮಿನ್ಸ್ ಹೇಳಿದ್ದಾರೆ.

ಇದನ್ನೂ ಓದಿ:70ಕಿಲೋ ಮೀಟರ್ ಪ್ರಯಾಣ,512 ಕೆಜಿ ಈರುಳ್ಳಿ ಮಾರಾಟ ಮಾಡಿದ ರೈತನಿಗೆ ಸಿಕ್ಕಿದ್ದೆಷ್ಟು ಗೊತ್ತಾ?

ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

Advertisement

ಎರಡನೇ ಪಂದ್ಯದ ಬಳಿಕ ಸ್ಮಿತ್ ತನ್ನ ಪತ್ನಿ ಡ್ಯಾನಿಯೊಂದಿಗೆ ದುಬೈನಲ್ಲಿ ನಾಲ್ಕು ದಿನಗಳನ್ನು ಕಳೆದಿದ್ದು, ಗುರುವಾರ ಸಂಜೆ ದೆಹಲಿಯಲ್ಲಿ ಆಸ್ಟ್ರೇಲಿಯಾ ತಂಡದ ಜತೆ ಸೇರಿಕೊಂಡಿದ್ದಾರೆ.

ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಸಾಧಿಸಿದೆ. ನಾಗ್ಪುರ ಮತ್ತು ಹೊಸದಿಲ್ಲಿಯಲ್ಲಿ ನಡೆದಿದ್ದ ಮೊದಲೆರಡು ಪಂದ್ಯಗಳನ್ನು ಭಾರತ ತಂಡ ಸುಲಭದಲ್ಲಿ ಗೆದ್ದುಕೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next