Advertisement
ಕರ್ನಾಟಕ ಯಕ್ಷ ಭಾರತಿ ಪುತ್ತೂರು ಹಾಗೂ ಯಕ್ಷಾಂಗಣ ಮಂಗಳೂರು ವತಿಯಿಂದ ರವಿವಾರ ಮಂಗಳೂರು ವಿ.ವಿ. ಕಾಲೇಜಿನಲ್ಲಿ ನಡೆದ ಕೀರ್ತಿ ಶೇಷ ಕಲಾವಿದರ ಸಂಸ್ಮರಣೆ ಹಾಗೂ ಯಕ್ಷಾಂಗಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ವಲಯ ಮುಖ್ಯಸ್ಥರು ಹಾಗೂ ಪ್ರಧಾನ ವ್ಯವಸ್ಥಾಪಕ ಯೋಗೀಶ್ ಆಚಾರ್ಯ ಮುಖ್ಯ ಅತಿಥಿಯಾಗಿದ್ದರು. ಪೂಂಜ-ಪದ್ಯಾಣ ಸಂಸ್ಮರಣೆ ಯನ್ನು ಮಂಗಳೂರು ವಿ.ವಿ. ಡಾ| ದಯಾ ನಂದ ಪೈ, ಸತೀಶ್ ಪೈ ಯಕ್ಷ ಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ| ಶ್ರೀಪತಿ ಕಲ್ಲೂರಾಯ ನಡೆಸಿದರು. ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ
ಎಸ್.ಪ್ರದೀಪ್ ಕುಮಾರ್ ಕಲ್ಕೂರ,ವಿ.ವಿ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ಸುಭಾಷಿಣಿ ಶ್ರೀವತ್ಸ, ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷ ಪ್ರತಿಷ್ಠಾನದ ಅಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ದಿ| ಪುರುಷೋತ್ತಮ ಪೂಂಜ ಅವರ ಪತ್ನಿ ಶೋಭಾ ಪೂಂಜಾ,ದಿ| ಪದ್ಯಾಣ ಗಣಪತಿ ಭಟ್ ಅವರ ಪುತ್ರ ಸ್ವಸ್ತಿಕ್ ಪದ್ಯಾಣ ಉಪಸ್ಥಿತರಿದ್ದರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ತೋನ್ಸೆ ಪುಷ್ಕಳ್ ಕುಮಾರ್ ನಿರೂಪಿಸಿದರು.