Advertisement

Patanjali: ಬಾಬಾ ರಾಮ್‌ ದೇವ್‌ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಸುಪ್ರೀಂ

01:05 PM Aug 13, 2024 | Team Udayavani |

ನವದೆಹಲಿ: ಪತಂಜಲಿ(Patanjali) ಆಯುರ್ವೇದ ಉತ್ಪನ್ನಗಳಿಗೆ ಸಂಬಂಧಿಸಿದಂತೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಕ್ಷಮೆಯಾಚಿಸಿರುವ ಯೋಗ ಗುರು ಬಾಬಾ ರಾಮ್‌ ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈಬಿಟ್ಟಿರುವುದಾಗಿ ಸುಪ್ರೀಂಕೋರ್ಟ್‌(Supreme court) ಮಂಗಳವಾರ (ಆಗಸ್ಟ್‌ 13) ಆದೇಶ ನೀಡಿದೆ.

Advertisement

ನ್ಯಾಯಾಂಗ ನಿಂದನೆ ಕೈಬಿಟ್ಟಿರುವ ಸುಪ್ರೀಂಕೋರ್ಟ್‌, ಒಂದು ವೇಳೆ ಆದೇಶ ಉಲ್ಲಂಘಿಸಿ ಯಾವುದೇ ನಿರ್ಧಾರ ಕೈಗೊಂಡರೇ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಂಗ ನಿಂದನೆ ಕುರಿತು ಮೇ 14ರಂದು ಸುಪ್ರೀಂಕೋರ್ಟ್‌ ಪೀಠದ ಜಸ್ಟೀಸ್‌ ಹಿಮಾ ಕೊಹ್ಲಿ ಮತ್ತು ಜಸ್ಟೀಸ್‌ ಅಸಾದುದ್ದೀನ್‌ ಅಮಾನುಲ್ಲಾ ಆದೇಶವನ್ನು ಕಾಯ್ದಿರಿಸಿದ್ದರು.

ಆಧುನಿಕ ವೈದ್ಯ ಪದ್ಧತಿ ಮತ್ತು ಕೋವಿಡ್‌ ಲಸಿಕೆ ವಿರುದ್ಧ ಪತಂಜಲಿ ಆಕ್ಷೇಪಾರ್ಹ ಪ್ರಚಾರ ಕೈಗೊಂಡಿತ್ತು. ಇದರ ವಿರುದ್ಧ ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ (IMA) ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

2023ರ ನವೆಂಬರ್‌ ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ಬಾಬಾ ರಾಮ್‌ ದೇವ್‌ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಇಂತಹ ಜಾಹೀರಾತು ನೀಡುವುದನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದರು.

ಆದರೆ ಪತಂಜಲಿ ಸಂಸ್ಥೆ ಫೆಬ್ರವರಿಯಲ್ಲಿ ಹಾದಿತಪ್ಪಿಸುವ ಜಾಹೀರಾತು ನೀಡುವುದನ್ನು ಮುಂದುವರಿಸಿರುವುದನ್ನು ಗಮನಿಸಿ ಪತಂಜಲಿ ಕಂಪನಿ ಮತ್ತು ಆಡಳಿತ ನಿರ್ದೇಶಕ ಬಾಲಕೃಷ್ಣ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿಗೊಳಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next