ಬಾಕ್ಸ್ ಆಫೀಸ್‌ನಲ್ಲಿ ಒಂದು ಸಾವಿರ ಕೋಟಿ ರೂ. ಕ್ಲಬ್‌ಗ ಸೇರ್ಪಡೆಯತ್ತ ಬಾಲಿವುಡ್ ತಾರೆಯರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾ ದಾಪುಗಾಲು ಇಡುತ್ತಿದೆ.
Advertisement
ವಿಶ್ವಾದ್ಯಂತ ಬಿಡುಗಡೆಯಾಗಿರುವ ಸಿನಿಮಾ, ಇದುವರೆಗೂ 988 ಕೋಟಿ ರೂ. ಗಳಿಸಿದೆ. ಚಿತ್ರ ಬಿಡುಗಡೆಯಾಗಿ 25 ದಿನಗಳಲ್ಲಿ ಭಾರತ ಒಂದರಲ್ಲೇ 511.42 ಕೋಟಿ ರೂ. ಗಳಿಸಿದೆ. ಇನ್ನು ಕೆಲವೇ ದಿನಗಳಲ್ಲಿ 1,000 ಕೋಟಿ ರೂ. ಗಳಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬಾಲಿವುಡ್ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಲಿದೆ.