Advertisement

Pathankot Mastermind: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಹತ್ಯೆ

01:16 PM Oct 11, 2023 | Team Udayavani |

ಇಸ್ಲಾಮಾಬಾದ್: ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು ಬುಧವಾರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

Advertisement

ಪಠಾಣ್ ಕೋಟ್ ದಾಳಿಯಿಂದ ಶಾಹಿದ್ ಲತೀಫ್ ಭಾರತದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಎನ್ನಲಾಗಿದ್ದು ಇದೀಗ ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

1994 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯ ಅಡಿಯಲ್ಲಿ ಲತೀಫ್ ನನ್ನು ಭಾರತ ಬಂಧಿಸಿತು. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಜೈಲುವಾಸವನ್ನೂ ಅನುಭವಿಸಿದ್ದ. 2010ರಲ್ಲಿ ಜೈಲು ಶಿಕ್ಷೆ ಮುಗಿಸಿ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಲಾಗಿತ್ತು. ಇದಲ್ಲದೆ, 1999 ರಲ್ಲಿ ನಡೆದ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಲತೀಫ್ ಆರೋಪಿಯಾಗಿದ್ದ ಎಂದು ಹೇಳಲಾಗಿದೆ. 2010ರಲ್ಲಿ ಪಾಕಿಸ್ತಾನಕ್ಕೆ ತೆರಳಿದ ಆತ ಮತ್ತೆ ಉಗ್ರರ ಜತೆ ಸೇರಿಕೊಂಡಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ. ಭಾರತ ಸರ್ಕಾರ ಲತೀಫ್ ನನ್ನ ಮೋಸ್ಟ್ ವಾಂಟೆಡ್ ವ್ಯಕ್ತಿಗಳ ಪಟ್ಟಿಗೆ ಸೇರಿಸಿತ್ತು.

ಇದನ್ನೂ ಓದಿ: Karkala ಪರಶುರಾಮ ಮೂರ್ತಿ: ಕಾಮಗಾರಿ ತಡೆ ಕೋರಿದ್ದ ಮುತಾಲಿಕ್ ಅರ್ಜಿ ವಜಾ ಮಾಡಿದ ಹೈಕೋರ್ಟ್

Advertisement

Udayavani is now on Telegram. Click here to join our channel and stay updated with the latest news.

Next