Advertisement
ಇನ್ನೊಂದೆಡೆ ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಹೊರ ರಾಜ್ಯಗಳ ಶಂಕಿತ ಕೋವಿಡ್- 19 ರೋಗಿಗಳನ್ನು ಅಥವಾ ಇತರ ಯಾವುದೇ ಸಾಂಕ್ರಾಮಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಚಿಕಿತ್ಸೆಗಾಗಿ ವಾಹನಗಳ ಮೂಲಕ ಕರೆತರುವುದನ್ನು ನಿಷೇಧಿಸಿ /ಮಹಾನಗರ ಪಾಲಿಕೆಯ ಆಯುಕ್ತರಾದ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾದ್ಯಂತ ಸೆಕ್ಷನ್ 144ನ್ನು ಮುಂದು ವರಿಸಲಾಗಿದೆ. ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಲ್ಲೆಗೆ 52 ಫ್ಲೆ$çಯಿಂಗ್ ಸ್ಕ್ವಾಡ್‌ಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ತಿಳಿಸಿದ್ದಾರೆ.
Related Articles
ಕೋವಿಡ್- 19 ದೃಢಪಟ್ಟು ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಜಿಲ್ಲಾಡಳಿತದಿಂದ ಬಿಡುಗಡೆಗೊಳ್ಳುವ ಹೆಲ್ತ್ ಬುಲೆಟಿನ್‌ನಲ್ಲಿ ಒಂದು ಬಾರಿಯಷ್ಟೇ ಸೋಂಕಿತರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಈ ನಡುವೆ, ಕೋವಿಡ್- 19 ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ತಿಂಗಳ ಶಿಶುವಿನ ಆರೋಗ್ಯ ಸುಧಾರಿಸುತ್ತಿರುವುದಾಗಿ ಮಗುವಿನ ಸಂಬಂಧಿಕರು ಹೇಳಿಕೊಂಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಜಿಪನಡುವಿನ 10 ತಿಂಗಳ ಶಿಶುವಿನಲ್ಲಿ ಮಾ. 27ರಂದು ಕೋವಿಡ್- 19 ಪತ್ತೆಯಾಗಿತ್ತು. ಶಿಶುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಶುವಿನ ಆರೋಗ್ಯದಲ್ಲಿ ಚೇತರಿಕೆ ಇದೆ ಎನ್ನಲಾಗುತ್ತಿದೆ.
Advertisement