Advertisement

ದೇಶಾಭಿಮಾನ ಯಾರೊಬ್ಬರ ಸ್ವತ್ತಲ್ಲ

04:33 PM Aug 14, 2022 | Team Udayavani |

ಭಾಲ್ಕಿ: ದೇಶಾಭಿಮಾನ, ರಾಷ್ಟ್ರಪ್ರೇಮದ ಬಗ್ಗೆ ಕೆಲವರು ನಾಟಕ ಆಡುತ್ತಿದ್ದಾರೆ. ಆದರೆ ಇದು ಯಾರೊಬ್ಬರ ಸ್ವತ್ತಲ್ಲ. ಯಾರೊಬ್ಬರಿಗೂ ಬರೆದುಕೊಟ್ಟಿಲ್ಲ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

Advertisement

ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ತಾಲೂಕು ಕಾಂಗ್ರೆಸ್‌ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯದ ಹಿಂದೆ ತ್ಯಾಗ, ಬಲಿದಾನ ಆಗಿದೆ. ರಕ್ತ ಕ್ರಾಂತಿ ಹರಿದಿದೆ. ಸಾವಿರಾರೂ ಜನ ಸೆರೆವಾಸ ಅನುಭವಿಸುತ್ತಿದ್ದಾರೆ. ಎಲ್ಲ ವರ್ಗ, ಎಲ್ಲ ಭಾಷೆ, ಪ್ರಾಂತ್ಯದ ಜನ ಸ್ವಾತಂತ್ರ್ಯಕ್ಕಾಗಿ ಹೋರಾಟ, ತ್ಯಾಗ, ಬಲಿದಾನ ಮಾಡಿದ್ದಾರೆ ಎನ್ನುವುದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

1885ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಪಕ್ಷವು ನೆಹರು, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಸೇರಿದಂತೆ ಮನಮೋಹನ್‌ ಸಿಂಗ್‌ ಅವಧಿಯವರೆಗೂ ದೇಶದ ಜನರ ಅಭಿವೃದ್ಧಿಗಾಗಿ ನೂರಾರು ಯೋಜನೆಗಳನ್ನು ರೂಪಿಸಿ ದೇಶ ಕಟ್ಟುವ ಕೆಲಸವನ್ನು ಪಕ್ಷ ಮಾಡಿದೆ. ಪಂಚ ವಾರ್ಷಿಕ ಯೋಜನೆ, ವಿದೇಶಾಂಗ ನೀತಿ, ಇಂದಿರಾಗಾಂಧಿ ಅವರು ದೇಶದ ಜನರು ಬಡತನದಿಂದ ಹೊರಬರಬೇಕೆಂದು ರೂಪಿಸಿದ 20 ಅಂಶಗಳ ಕಾರ್ಯಕ್ರಮ, ರಾಜೀವ್‌ ಗಾಂಧಿ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಲಬುರಗಿಯ ಶರಣು ಮೋದಿ, ಪುರಸಭೆ ಅಧ್ಯಕ್ಷ ಅನಿಲ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ, ತಾಲೂಕು ಅಧ್ಯಕ್ಷ ಹಣಮಂತರಾವ ಚವ್ಹಾಣ, ಅಶೋಕ ಸೋನಜೀ, ಮಡಿವಾಳಪ್ಪ ಮಂಗಲಗಿ, ಅಮೃತರಾವ ಚಿಮಕೋಡ್‌, ಶಿವರಾಜ ಹಾಸನಕರ್‌ ಸೇರಿದಂತೆ ಹಲವರು ಇದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next