Advertisement

“ದೇಶಾಭಿಮಾನದಿಂದ ಉತ್ತಮ ಸಮಾಜ ಸೃಷ್ಟಿ’

08:57 PM Jun 17, 2019 | Team Udayavani |

ಕೋಟ: ದೇಶಾ ಭಿಮಾನದಿಂದ ಉತ್ತಮ-ಆರೋಗ್ಯಕರ ಸಮಾಜ ಸೃಷ್ಟಿಯಾಗುತ್ತದೆ. ಬಾಲ್ಯದಲ್ಲೇ ಮಕ್ಕಳಿಗೆ ದೇಶಾಭಿಮಾನ ಬೆಳೆಸಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ, ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ತಾಲೂಕು ಬಾಲಭವನ ಸಮಿತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಕಾರಂತ ಪ್ರತಿಷ್ಠಾನ ಕೋಟ ಸಂಯುಕ್ತ ಆಶ್ರಯದಲ್ಲಿ ಕೋಟ ಕಾರಂತ ಥೀಮ್‌ ಪಾರ್ಕ್‌ನಲ್ಲಿ ಜರಗಿದ ವಾರಂತ್ಯ ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬ್ರಹ್ಮಾವರ ಶಿಶು ಅಭಿವೃದ್ಧಿ ಇಲಾಖೆಯ ಪ್ರಭಾರ ಯೋಜನಾ ಧಿಕಾರಿ ಶೋಭಾ ಶೆಟ್ಟಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್‌ ಕೋಟ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ, ಪ್ರತಿಷ್ಠಾನದ ಟ್ರಸ್ಟಿ ಸತೀಶ್‌ ವಡ್ಡರ್ಸೆ, ಸಂಪನ್ಮೂಲ ವ್ಯಕ್ತಿ ಕೆ.ಕೆ.ಶಿವರಾಮ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next