Advertisement

ಗಡಿ ಭಾಗದಲ್ಲಿನ ಪಟ್ಟದೇವವರ ಶೈಕ್ಷಣಿಕ ಸೇವೆ ಮಾದರಿ

04:05 PM Sep 17, 2022 | Team Udayavani |

ಭಾಲ್ಕಿ: ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ 2022ನೇ ಸಾಲಿನ ಜೆಇಇಇ ಸಾಧಕ ವಿದ್ಯಾರ್ಥಿಗಳ ಕರಪತ್ರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಬಿಡುಗಡೆಗೊಳಿಸಿದರು.

Advertisement

ಬೆಂಗಳೂರಿನ ವಿಧಾನಸೌಧದ ಶಿಕ್ಷಣ ಇಲಾಖೆ ಕೊಠಡಿಯಲ್ಲಿ ಗುರುವಾರ ಕರಪತ್ರ ಬಿಡುಗಡೆ ಮಾಡಿದ ಅವರು, ಬೀದರ ಜಿಲ್ಲೆಯ ಗಡಿ ಭಾಗದಲ್ಲಿ ಡಾ| ಬಸವಲಿಂಗ ಪಟ್ಟದ್ದೇವರು ಬಸವತತ್ವ ಪ್ರಚಾರ ಪ್ರಸಾರದ ಜತೆಗೆ ದೀನ ದುರ್ಬಲ, ಬಡ ವರ್ಗದ ಜನರಿಗೆ ಅನ್ನ, ಆಶ್ರಯ ನೀಡುತ್ತಿರುವುದು ಮಾದರಿ ಎನಿಸಿದೆ. ಅದಲ್ಲದೇ ಗಡಿ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದೊಂದಿಗೆ ಸ್ಥಾಪಿಸಿರುವ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಮೂಲಕ ಶೈಕ್ಷಣಿಕ ಕ್ರಾಂತಿ ನಡೆಯುತ್ತಿದೆ. ವಿಶೇಷವಾಗಿ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಫಸ್ಟ್‌ ರ್‍ಯಾಂಕ್‌ ತಂದು ಕೊಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇಲ್ಲಿಯ ಗ್ರಾಮೀಣ ಭಾಗದ ಮತ್ತು ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ತೋರುತ್ತಿರುವುದು ಖುಷಿ ತಂದು ಕೊಟ್ಟಿದೆ. ನೀಟ್‌, ಜೆಇಇಯಂತಹ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ರ್‍ಯಾಂಕ್‌ ಪಡೆದು ಸಾಧನೆ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆಯುತ್ತಿದ್ದಾರೆ. ಪಟ್ಟದ್ದೇವರು ಶೈಕ್ಷಣಿಕ ಸೇವೆ ಮೂಲಕ ಗಡಿ ಭಾಗವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಸ್ಥೆಯಿಂದ ಮತ್ತಷ್ಟು ಪ್ರತಿಭಾವಂತ ವಿದ್ಯಾರ್ಥಿಗಳು ಹೊರ ಬಂದು ರಾಜ್ಯ ಮತ್ತು ರಾಷ್ಟ್ರಕ್ಕೆ ತಮ್ಮ ಕೊಡುಗೆ ನೀಡಲಿ, ಶ್ರೀಗಳಿಗೆ ಇನ್ನಷ್ಟು ಸಾಮಾಜಿಕ ಕೆಲಸ ಕೈಗೊಳ್ಳಲಿ. ದೇವರು ಶಕ್ತಿ ಕೊಡಲಿ ಎಂದು ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಪೀಠಾ ಧಿಪತಿ ಗುರುಬಸವ ಪಟ್ಟದ್ದೇವರು, ಸಂಸ್ಥೆಯ ನಿರ್ದೇಶಕ ಶಶಿಧರ ಕೋಸಂಬೆ, ಒಎಸ್‌ಡಿ ಚಂದ್ರಶೇಖರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next