Advertisement

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

04:27 PM Sep 18, 2024 | Team Udayavani |

ಪಾವಗಡ: ಮೃತದೇಹವನ್ನು ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧರ ಮೃತದೇಹವನ್ನು ತಮ್ಮೂರಿಗೆ ಸಾಗಿಸಲು ಮಕ್ಕಳು ದ್ವಿಚಕ್ರ ವಾಹನದಲ್ಲಿ ತೆಗೆದುಕೊಂಡು ಹೋದ ಹೃದಯವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಸೆ.18ರ ಬುಧವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ನಡೆದಿದೆ.

Advertisement

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎಂಬ 80 ವರ್ಷದ ವೃದ್ಧ ವೈ.ಎನ್. ಹೋಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು.

ಮೃತಪಟ್ಟಿರುವ ಹೊನ್ನೂರಪ್ಪ ಅವರ ಶವವನ್ನು ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ದ್ವಿಚಕ್ರ ವಾಹನದಲ್ಲಿಯೇ ಹೊನ್ನೂರಪ್ಪ ಅವರ ಹಿರಿಯ ಪುತ್ರ ಚಂದ್ರಣ್ಣ ಮತ್ತು ಕಿರಿಯ ಪುತ್ರ ಗೋಪಾಲಪ್ಪ ತಮ್ಮೂರಿಗೆ ತೆಗೆದುಕೊಂಡು ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next