Advertisement

ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆ ಮೇಳ: ಇಲ್ಲಿದೆ ಕಲಾವಿದರ ಸಂಪೂರ್ಣ ಪಟ್ಟಿ

09:21 PM Oct 17, 2020 | keerthan |

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಮೇರು ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಕಲಾವಿದರಾಗಿರುವ ಪಾವಂಜೆ ಮೇಳ ಆರಂಭದ ಕುರಿತು ಊಹಾಪೋಹಗಳಿಗೆ ತೆರೆಬಿದ್ದಿದೆ. ನವೆಂಬರ್ ತಿಂಗಳು 27ರಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ , ಪಾವಂಜೆಯ ಪ್ರದರ್ಶನ ಆರಂಭವಾಗಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ಹೇಳಿದರು.

Advertisement

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ಮತ್ತು ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ನೂತನ ಮೇಳದ ಬಗ್ಗೆ ಮಾಹಿತಿ ನೀಡಿದರು.

ಮೇಳದ ಯಕ್ಷಗಾನ ಪ್ರದರ್ಶನವು ಕಾಲಮಿತಿಯದ್ದಾಗಿದ್ದು, ಸಾಮಾನ್ಯವಾಗಿ ಸಂಜೆ 6 ಗಂಟೆಯಿಂದ 11ರವರೆಗಿನ ಅವಧಿಯಲ್ಲಿ ನಡೆಯಲಿದೆ. ಈ ಎಲ್ಲಾ ಪ್ರದರ್ಶನಗಳನ್ನು ಕೋವಿಡ್-19ರ ಪರಿಸ್ಥಿತಿಯಲ್ಲಿ ಸರಕಾರ ನೀಡುವ ನಿರ್ದೇಶನಗಳಿಗೆ ಒಳಪಟ್ಟು ನಡೆಸಲಾಗುವುದು ಎಂದಿದ್ದಾರೆ.

ಕಲಾವಿದರ ಪಟ್ಟಿ

Advertisement

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ , ಪಾವಂಜೆಯಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಭಾಗವತರಾಗಿದ್ದು, ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಸಾಥ್ ನೀಡಲಿದ್ದಾರೆ. ಹಿಮ್ಮೇಳದಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ ಇರಲಿದ್ದಾರೆ.

ಹಾಸ್ಯ ಪಾತ್ರಧಾರಿಗಳು: ಉಜಿರೆ ನಾರಾಯಣ, ಸಂದೇಶ್ ಮಂದಾರ

ಸ್ತ್ರೀ ಪಾತ್ರ: ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು

ಪ್ರಧಾನ ಪಾತ್ರ: ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಮಾನ್ಯ, ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮತ್ತಿತರು.

Advertisement

Udayavani is now on Telegram. Click here to join our channel and stay updated with the latest news.

Next