Advertisement

ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಡಿವೈಎಸ್‌ಪಿ ಸುಂದರರಾಜ್‌

09:43 PM Jun 27, 2019 | Sriram |

ಮಡಿಕೇರಿ : ಪೋಷಕರಿಗೆ ಮಕ್ಕಳ ಸುರಕ್ಷತೆಯೇ ಆದ್ಯ ಕರ್ತವ್ಯ ವಾಗಿರಬೇಕೆಂದು ಉಪ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಸುಂದರ ರಾಜ್‌ ಅವರು ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ, ಪೊಲೀಸ್‌, ಪ್ರಾದೇಶಿಕ ಸಾರಿಗೆ ಇಲಾಖೆಗಳ ಸಹ ಯೋಗದಲ್ಲಿ ನಗರದ ಜೂನಿಯರ್‌ ಕಾಲೇಜಿನ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ಮಕ್ಕಳ ಸುರಕ್ಷತೆ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ನಡೆದ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಕಳುಹಿಸುವ ಸಂದರ್ಭದಲ್ಲಿ ಒಂದು ವಾಹನದಲ್ಲಿ ಎಷ್ಟು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂಬು ದನ್ನು ಗಮನಿಸಬೇಕು ಎಂದರು.

ಶಾಲೆಗೆ ಕಳುಹಿಸುವ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸುವಂತಾಗಬೇಕು. ಶಾಲಾ ಮಕ್ಕಳನ್ನು ನಿರ್ದಿಷ್ಟ ವಾಹನ ದಲ್ಲಿ ಇಂತಿಷ್ಟು ಆಸನ ವ್ಯವಸ್ಥೆ ಇರುವ ವಾಹ ನದಲ್ಲಿ ಕರೆದುಕೊಂಡು ಹೋಗಬೇಕು ಎಂದರು.

ಶಾಲೆಗಳಲ್ಲಿ ಪೋಷಕರ ಸಭೆಯನ್ನು ಕಾಲ ಕಾಲಕ್ಕೆ ನಡೆಸಬೇಕು. ಮಕ್ಕಳನ್ನು ಶಾಲೆಗೆ ಸಿದ್ಧತೆ ಮಾಡಿ ಕಳುಹಿಸುವುದರ ಜೊತೆಗೆ ಸುರಕ್ಷತೆಯಿಂದ ಕರೆದುಕೊಂಡು ಹೋಗುತ್ತಾರೆಯೇ ಎಂಬುದನ್ನು ಪೋಷಕರು ಗಮನಿಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಂದರ ರಾಜ್‌ ಅವರು ಹೇಳಿದರು.

Advertisement

ಅಗ್ನಿಶಾಮಕ ಇಲಾಖೆಯ ಅಧಿಕಾರಿ ಚಂದನ್‌ ಅವರು ವಾಹನಗಳಲ್ಲಿ ಬೆಂಕಿ ಅವಘಡಗಳನ್ನು ತಡೆಯುವುದು, ವಾಹನ ಸುರಕ್ಷತೆ ಕಡೆ ಗಮನ ಹರಿಸುವುದು ಮತ್ತಿತರ ಬಗ್ಗೆ ಮಾಹಿತಿ ನೀಡಿದರು.

ಪ್ರಾದೇಶಿಕ ಸಾರಿಗೆ ಕಚೇರಿಯ ವ್ಯವಸ್ಥಾಪಕರಾದ ಶಿವಣ್ಣ ಅವರು ಆಟೋ ರಿಕ್ಷಾಗಳಲ್ಲಿ 6 ವಿದ್ಯಾರ್ಥಿಗಳಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಮೋಟಾರು ವಾಹನ ಕಾಯ್ದೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಇಲ್ಲದಿದ್ದಲ್ಲಿ 2 ರಿಂದ 5 ಸಾವಿರವರೆಗೆ ದಂಡ, ಜೊತೆಗೆ ಸೆರೆವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಾಹನ ಚಾಲಕರಿಗೆ ಕನಿಷ್ಠ 5 ವರ್ಷ ವಾಹನ ಚಾಲನಾ ಅನುಭವವಿದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ವಾಹನ ಸುಸ್ಥಿತಿಯಲ್ಲಿದೆಯೇ ಎಂಬುದನ್ನು ಗಮನಿಸಬೇಕು ಎಂದರು. ಕ್ಷೇತ್ರ ಶಿಕ್ಷಣಾ ಧಿಕಾರಿ ಗಾಯತ್ರಿ, ಪೊಲೀಸ್‌ ಇನ್ಸ್‌ ಪೆಕ್ಟರ್‌ ಅನೂಪ್‌ ಮಾದಪ್ಪ, ಪೋಷಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next