Advertisement

Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ

09:28 AM Oct 30, 2024 | Team Udayavani |

ಮುಂಬಯಿ: ಬಾಲಿವುಡ್ ದಿಗ್ಗಜ ಸಲ್ಮಾನ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇರಿಸಿ ಕೊ*ಲೆ ಬೆದರಿಕೆ ಬಂದಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದು, ಹಣ ಪಾವತಿಸದಿದ್ದರೆ ನಟನನ್ನು ಹತ್ಯೆ ಗೈಯಲಾಗುವುದು ಎಂದು ಹೇಳಲಾಗಿದೆ.

Advertisement

ಬೆದರಿಕೆ ಸಂದೇಶವನ್ನು ಸ್ವೀಕರಿಸಿದ ನಂತರ, ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಿತನಿಖೆಯನ್ನು ಪ್ರಾರಂಭಿಸಿದ್ದಾರೆ.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಶಾಸಕ, ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ ಜೀಶಾನ್ ಸಿದ್ದಿಕಿ ಮತ್ತು ಸಲ್ಮಾನ್ ಖಾನ್ ಅವರಿಗೆ ಬಂದ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ.

ಸಲ್ಮಾನ್ ಖಾನ್ ಅವರಿಗೆ ಆಪ್ತರಾಗಿದ್ದ ಬಾಬಾ ಸಿದ್ದಿಕಿ ಅವರನ್ನು ಅಕ್ಟೋಬರ್ 12 ರಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ದಾಳಿ ನಡೆಸಿ ಹತ್ಯೆ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 15 ಮಂದಿಯನ್ನು ಬಂಧಿಸಿದ್ದಾರೆ.

ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ಜಾರ್ಖಂಡ್‌ನ ಜೆಮ್‌ಶೆಡ್‌ಪುರದ ಶೇಖ್ ಹುಸೇನ್ ಶೇಖ್ ಮೌಸಿನ್ ನನ್ನ (24) ಅ.23 ರಂದು ಮುಂಬೈ ಪೊಲೀಸರು ಬಂಧಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next