ಸಿಂದಗಿ: ಪರಿಸರ ನಾಶದಿಂದ ಜಾಗತಿಕ ತಾಪಮಾನ ಹಾಗೂ ಇತರ ಕೊರೊನಾದಂತಹ ರೋಗಗಳಿಂದ ಆಗುತ್ತಿರುವ ಹಾನಿಯನ್ನು ಎದುರಿಸಬೇಕಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾ ಧಿಕಾರಿ ವಿ.ವೈ. ದೇವಣಗಾಂವ ಹೇಳಿದರು.
ಮಂಗಳವಾರ ತಾಲೂಕಿನ ಹೊನ್ನಳ್ಳಿ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರ ರಕ್ಷಣೆ ಮಾಡುವ ಜೊತೆಗೆ ಬೆಳೆಸಬೇಕು. ಕೆಟ್ಟ ಮೇಲೆ ಬುದ್ಧಿ ಬಂದಂತೆ ಮನುಷ್ಯ ತನ್ನ ಸ್ವಾರ್ಥ ಜೀವನಕ್ಕಾಗಿ ಪರಿಸರ ನಾಶ ಮಾಡಿ ನಗರ, ಕೈಗಾರಿಕೆ ಅಭಿವೃದ್ಧಿ ಮಾಡಿದ್ದಾನೆ.
ಪರಿಸರ ನಾಶದಿಂದ ಪರಿಸರದಲ್ಲಿ ಏರು ಪೇರು ಉಂಟಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದೇವೆ. ಆದ್ದರಿಂದ ಇನ್ನಾದರು ನಾವು ಪರಿಸರ ರಕ್ಷಣೆ ಬಗ್ಗೆ ಜಾಗೃತರಾಗೋಣ. ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸೋಣ. ಶಿಕ್ಷಕರು ಪಾಠ ಬೋಧನೆ ಸಂದರ್ಭದಲ್ಲಿ ಪರಿಸರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಪರಿಸರ ನಾಶದಿಂದ ಹೃದಯ ಹಾಗೂ ಉಸಿರಾಟ ಸಂಬಂಧಿ ತ ಖಾಯಿಲೆ, ಕ್ಯಾನ್ಸರ್, ಅಪೌಷ್ಟಿಕತೆ, ಕೊರೊನಾ ರೋಗಗಳಂತಹ ಅನೇಕ ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದೇವೆ.
ಈಗಾಗಲೇ ಕೊರೊನಾ ರೋಗಕ್ಕೆ ತುತ್ತಾಗುತ್ತಿರುವುದರ ಜೊತೆಗೆ ಆಮ್ಲಜನಕದ ಕೊರತೆಯನ್ನು ಕೂಡ ಅನುಭವಿಸುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಪರಿಸರ ಉಳಿವಿಗಾಗಿ ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸಬೇಕು ಎಂದರು.
ಪರಿಸರ ಸಂರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಜೂನ್ 5ರಂದು ವಿಶ್ವ ಪರಿಸರ ದಿನವೆಂದು ಆಚರಿಸಲಾಗುತ್ತದೆ. ಹೀಗಿರುವಾಗ ಪರಿಸರ ಕಾಳಜಿ ಕುರಿತಾಗಿ ಗಮನ ಹರಿಸಲೇಬೇಕಿದೆ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಪರಿಸರ ಬೆಳೆಸುವ ಮೂಲಕ ವಾತಾವರಣದಲ್ಲಿ ಆಮ್ಲಜನಕದ ಪ್ರಮಾಣ ಹೆಚ್ಚಿಸೋಣ ಎಂದು ಹೇಳಿದರು. ಪ್ರೌಢಶಾಲೆ ಶಿಕ್ಷಕರು, ಸಿಬ್ಬಂ ದಿ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಇದ್ದರು.