ಮುಂಬಯಿ: ಉಡುಪಿ ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ಆ. 14 ರಂದು ಸಂಜೆ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ, ಮಾರ್ಗದರ್ಶನಗಳೊಂದಿಗೆ ಸಾಂಪ್ರದಾಯಿಕ ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಾಲನೆ ನೀಡಲಾಯಿತು.
ಆ ಪ್ರಯುಕ್ತ ಮಠದಲ್ಲಿ ಶಿಲಾಮಯ ಪ್ರತಿಷ್ಠಾಪಿತ ಶ್ರೀ ಕೃಷ್ಣ ದೇವರಿಗೆ ವಿದ್ವಾನ್ ರಾಮದಾಸ ಉಪಾಧ್ಯಾಯ ರೆಂಜಾಳ ಅವರು ವಿವಿಧ ಪೂಜೆಗಳನ್ನು ನೆರವೇರಿಸಿ ಅದ್ದೂರಿಯಾಗಿ ಜನ್ಮಾಷ್ಟಮಿ ಆಚರಿಸಿದರು. ಸಂಜೆ ಪೇಜಾವರ ಮಠದ ಮಧೆÌàಶ ಭಜನ ಮಂಡಳಿಯಿಂದ ಭಜನ ಕಾರ್ಯಕ್ರಮ ನಡೆಯಿತು. ಆನಂತರ ಶ್ರೀ ಕೃಷ್ಣ ಪ್ರತಿಷ್ಠಾನ ಮುಂಬಯಿ ಸಂಸ್ಥಾಪಕ ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಅವರಿಂದ ಹರಿಕಥೆ ಜರಗಿತು. ರಾತ್ರಿ ಶ್ರೀ ಕೃಷ್ಣ ದೇವರಿಗೆ ತುಳಸಿ ಅರ್ಚನೆ ಬಳಿಕ ಮಹಾ ಪೂಜೆ, ಕೃಷ್ಣಾಘÂì ಪ್ರದಾನ ಇತ್ಯಾದಿ ಪೂಜೆಗಳು ನೆರವೇರಿದವು.
ಈ ಸಂದರ್ಭದಲ್ಲಿ ವಿಶೇಷ ಅಭ್ಯಾಗತರಾಗಿ ಪೇಜಾವರ ಶ್ರೀಗಳ ಕಾರ್ಯದರ್ಶಿ ವಿಷ್ಣುಮೂರ್ತಿ ಆಚಾರ್ಯ ಉಡುಪಿ ಹಾಗೂ ಪೂರ್ಣಪ್ರಜ್ಞವಿದ್ಯಾಪೀಠ ಪ್ರತಿಷ್ಠಾನದ ಗೌರವ ಅಧ್ಯಕ್ಷ ಡಾ| ಎ. ಎಸ್. ರಾವ್, ಗೌರವ ಕಾರ್ಯದರ್ಶಿಗಳಾದ ಬಿ. ಆರ್. ಗುರುಮೂರ್ತಿ, ಗೌರವ ಕೋಶಾಧಿಕಾರಿ ಅವಿನಾಶ್ ಶಾಸ್ತ್ರಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಟಿ. ಬಿ. ಹುನ್ನೂರು, ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ಪ್ರಕಾಶ ಆಚಾರ್ಯ ರಾಮಕುಂಜ, ರಾಮದಾಸ ಉಪಾಧ್ಯಾಯ ರೆಂಜಾಳ, ಹರಿ ಭಟ್, ನಿರಂಜನ್ ಗೋಗೆr ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದು ಶ್ರೀ ಕೃಷ್ಣ ದೇವರಿಗೆ ಪೂಜೆ ನೆರವೇರಿಸಿದರು.
ಆ. 15ರಿಂದ ಮಠದ ಪ್ರದೇಶದಲ್ಲಿ ವಿವಿಧ ವೇಷಭೂಷಣ, ವಾದ್ಯ ವೈವಿಧ್ಯಗಳ ನಾದದೊಂದಿಗೆ ಶ್ರೀ ಕೃಷ್ಣ ವಿಟ್ಲ ಪಿಂಡಿ ಉತ್ಸವ ನಡೆಯಲಿದೆ.
ಸಂಜೆ 6ರಿಂದ ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ, ಬಳಿಕ ಕು| ವಿಂದ್ಯಾ ಆಚಾರ್ಯ ಉಡುಪಿ ಅವರಿಂದ ಭರತನಾಟ್ಯ ಕಾರ್ಯಕ್ರಮ. 7.30ರಿಂದ ವಿದ್ವಾನ್ ಮುಕುಂದ ಪೈ ಕಾರ್ಕಳ ಅವರಿಂದ ದಾಸವಾಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಡಿನ ಸಮಸ್ತ ಭಕ್ತರು ಸಹಭಾಗಿಗಳಾಗಿ ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪ್ರಕಾಶ ಆಚಾರ್ಯ ತಿಳಿಸಿದ್ದಾರೆ.
ಚಿತ್ರ-ವರದಿ : ರೋನ್ಸ್ ಬಂಟ್ವಾಳ್