ಮೊಹಾಲಿ: ಐಪಿಎಲ್ ಸೀಸನ್ 16ರ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಹೋರಾಟಕ್ಕೆ ಅಣಿಯಾಗಿದೆ. ಟಾಸ್ ಗೆದ್ದ ಕೆಕೆಆರ್ ನಾಯಕ ನಿತೀಶ್ ರಾಣಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಎರಡೂ ತಂಡಗಳು ನೂತನ ನಾಯಕರನ್ನು ಹೊಂದಿರುವುದು ವಿಶೇಷ. ಪಂಜಾಬ್ ತಂಡವನ್ನು ಶಿಖರ್ ಧವನ್ ಹಾಗೂ ಕೆಕೆಆರ್ ತಂಡವನ್ನು ನಿತೀಶ್ ರಾಣಾ ಮುನ್ನಡೆಸಲಿದ್ದಾರೆ. ಕಳೆದ ಸೀಸನ್ ನಲ್ಲಿ ಕ್ರಮವಾಗಿ ಮಾಯಾಂಕ್ ಅಗರ್ವಾಲ್ ಹಾಗೂ ಶ್ರೇಯಸ್ ಅಯ್ಯರ್ ಈ ತಂಡಗಳ ಕಪ್ತಾನರಾಗಿದ್ದರು. ಟ್ರೆವರ್ ಬೇಲಿಸ್ ಮತ್ತು ಚಂದ್ರಕಾಂತ್ ಪಂಡಿತ್ ಈ ಬಾರಿಯ ಕೋಚ್ ಆಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಇತ್ತಂಡಗಳೂ ತಂಡದ ಆಯ್ಕೆ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಸ್ಥಿರ ಪ್ರದರ್ಶನ ನೀಡುತ್ತ ಬಂದಿವೆ. ಎಲ್ಲಿಯೂ ನೆಚ್ಚಿನ ತಂಡಗಳೆಂದು ಗುರುತಿಸಲ್ಪಡಲೇ ಇಲ್ಲ. 2022ರ ಋತುವಿನಲ್ಲಿ ಪಂಜಾಬ್ 6ಕ್ಕೆ ಹಾಗೂ 2 ಬಾರಿಯ ಚಾಂಪಿಯನ್ ಕೆಕೆಆರ್ 7ನೇ ಸ್ಥಾನಕ್ಕೆ ಕುಸಿದಿತ್ತು.
ತಂಡಗಳು
ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಮನ್ದೀಪ್ ಸಿಂಗ್, ನಿತೀಶ್ ರಾಣಾ (ನಾ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ, ಅನುಕುಲ್ ರಾಯ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾ), ಪ್ರಭಾಸಿಮ್ರಾನ್ ಸಿಂಗ್ (ವಿ.ಕೀ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕರ್ರನ್, ಸಿಕಂದರ್ ರಜಾ, ನಾಥನ್ ಎಲ್ಲಿಸ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್