Advertisement

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

11:16 PM Jan 02, 2025 | Team Udayavani |

ಕರಾಚಿ: ಮುಂದಿನ ತಿಂಗಳ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಕೂಟಕ್ಕೆ ಮುಂಚಿತವಾಗಿ ನ್ಯಾಶನಲ್‌ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಗೊಳಿಸಲು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಹರಸಾಹಸ ನಡೆಸುತ್ತಿದೆ. ಇದಕ್ಕಾಗಿ ಈ ತಾಣದಲ್ಲಿ ನಿಗದಿಯಾಗಿದ್ದ ಎಲ್ಲ ಪಂದ್ಯಗಳನ್ನು ಇತರ ತಾಣಗಳಿಗೆ ಸ್ಥಳಾಂತರ ಮಾಡಲಾಗಿದೆ.
ಕರಾಚಿಯ ಈ ಕ್ರೀಡಾಂಗಣದಲ್ಲಿ ಫೆ. 19ರಂದು ಚಾಂಪಿಯನ್ಸ್‌ ಟ್ರೋಫಿಯ ಆರಂಭಿಕ ಪಂದ್ಯವು ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ಥಾನವು ನ್ಯೂಜಿಲ್ಯಾಂಡ್‌ ತಂಡವನ್ನು ಎದುರಿಸಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next