Advertisement
ಶಾಂತಿ ಸಭೆಯಲ್ಲಿ ಮುಖಂಡರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅಧ್ಯಕ್ಷತೆ ವಹಿಸಿದ್ದ ಇನ್ಸ್ ಪೆಕ್ಟರ್ ದೇವೇಂದ್ರ ಅವರು, ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕೆಂದು ಮನವಿ ಮಾಡಿ. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು.ಇದರಿಂದ ಮುಂದೆ ಯುವಕರು ಉದ್ಯೋಗಕ್ಕೆ ಹೋಗುವ ವೇಳೆ ತೊಂದರೆಯಾಗಲಿದೆ.ಶಾಂತಿ ಭಂಗ ತರುವವರ ವಿರುದ್ದ ಪೊಲೀಸರು ಕಣ್ಗಾವಲಿಟ್ಟಿದ್ದು. ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.