Advertisement

ಸಮಾಜಘಾತಕ ಶಕ್ತಿಗಳಿಂದ ಶಾಂತಿ ಕದಡುವ ಷಡ್ಯಂತ್ರ: ನಳಿನ್‌

12:44 PM May 31, 2017 | Team Udayavani |

ಮಂಗಳೂರು: ಸಮಾಜ ಘಾತಕ ಶಕ್ತಿಗಳಿಂದ ದ.ಕ. ಜಿಲ್ಲೆಯಲ್ಲಿ ಶಾಂತಿ ಕದಡುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಪೊಲೀಸ್‌ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕಾಂಗ್ರೆಸ್‌ ಜನಪ್ರತಿನಿಧಿಗಳು ದುಷ್ಕರ್ಮಿಗಳ ಬೆಂಬಲಕ್ಕೆ ನಿಂತಿದ್ದಾರೆ. ಅಮಾಯಕ ಹಿಂದೂ ಯುವಕರನ್ನು ವಿನಾ ಕಾರಣ ಬಂಧಿಸಿ ಹಿಂಸೆ ನೀಡುವ ಪ್ರವೃತ್ತಿ ಮತ್ತೆ ಆರಂಭವಾಗಿದ್ದು, ಇದರ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ ಎಂದು ದ.ಕ. ಸಂಸದ ನಳಿನ್‌ಕುಮಾರ್‌ ಕಟೀಲು ಎಚ್ಚರಿಸಿದ್ದಾರೆ.

Advertisement

ಕಲ್ಲಡ್ಕ ಪ್ರಕರಣದಲ್ಲಿ ನಿರಪರಾಧಿಗಳನ್ನು ಬಂಧಿಸಿರುವುದು ಬಹುಸಂಖ್ಯಾಕ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ಯಾವುದೇ ಪ್ರಕರಣ ನಡೆದರೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುವಂತೆ ಪೊಲೀಸ್‌ ಇಲಾಖೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಅವರು ಹೇಳಿದರು.

ಪೊಲೀಸರು ಆಡಳಿತ ಪಕ್ಷದ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷವಾಗಿ ಕಾರ್ಯನಿರ್ವಹಿಸಬೇಕು. ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದಾಗ ಹಿಂದೂ ವಿರೋಧಿ ನೀತಿ ಅನುಸರಿಸಿದ ಕಾಂಗ್ರೆಸ್‌ಗೆ ಮತದಾರರು ಸೂಕ್ತ ಉತ್ತರ ನೀಡಿದ್ದರು. ಇದೀಗ ಮತ್ತೆ ಕಾಂಗ್ರೆಸ್‌ ತನ್ನ ಹಳೆ ಚಾಳಿ ಮುಂದುವರಿಸಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನತೆ ತಕ್ಕ ಪಾಠ ಕಲಿಸಲಿ ದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next