Advertisement

ಪೀಣ್ಯಾ ಫ್ಲೈ ಓವರ್ ಸಮಸ್ಯೆ ಡಿಸೆಂಬರ್ ಅಂತ್ಯಕ್ಕೆ ಬಗೆಹರಿಸುತ್ತೇವೆ: ಸಿಎಂ ಭರವಸೆ

03:06 PM Sep 20, 2022 | Team Udayavani |

ವಿಧಾನಸಭೆ: ಪೀಣ್ಯ ಫ್ಲೈ ಓವರ್ ಮೇಲೆ ಭಾರೀ ವಾಹನಗಳ ಓಡಾಟ ನಿರ್ಬಂಧವನ್ನು ಡಿಸೆಂಬರ್ ಅಂತ್ಯದೊಳಗಾಗಿ ಪರಿಹರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Advertisement

ಸರ್ವಿಸ್ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ವಿಚಾರದ ಬಗ್ಗೆ ದಾಸರಹಳ್ಳಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಫ್ಲೈಓವರ್ ಕೇಬಲ್ ಕಟ್ ಆಗಿದ್ರಿಂದ ಸಂಚಾರ ನಿರ್ಬಂಧ ಮಾಡಲಾಗಿತ್ತು. ದುರಸ್ತಿ ಬಳಿಕ‌ ಮತ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಭಾರೀ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಡಿಸೆಂಬರ್ ಒಳಗೆ ಸಮಸ್ಯೆ ಬಗೆಹರಿಸಿ ಭಾರೀ ವಾಹನಗಳ ಸಂಚಾರಕ್ಕೂ ಅವಕಾಶ ಕೊಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಜಮ್ಮು-ಕಾಶ್ಮೀರ: ಗ್ರೌಂಡ್ ಜೀರೋ ಸಿನಿಮಾ ಚಿತ್ರೀಕರಣದ ವೇಳೆ ಕಲ್ಲು ತೂರಾಟ, ಓರ್ವನ ಬಂಧನ

ಭಾರೀ ವಾಹನಗಳಿಗೆ ಸುರಕ್ಷತೆ ಕ್ರಮ ಕೈಗೊಳ್ಳಬೇಕಾಗಿದೆ. ನಿತಿನ್ ಗಡ್ಕರಿಯವರು ಬಂದಾಗ ಸಮಸ್ಯೆ ಗಮನಕ್ಕೆ ತಂದಿದ್ದೇವೆ. ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದು ಅಗತ್ಯ ಕ್ರಮಗಳನ್ನು ಕೈಗೊಳ್ತೇವೆ. ಆದಷ್ಟು ಬೇಗ ಪೀಣ್ಯ ಫ್ಲೈಓವರ್ ಸಮಸ್ಯೆ ಬಗೆಹರಿಸುತ್ತೇವೆ ಎಂದು ವಿವರಿಸಿದರು.

Advertisement

ಆದರೆ ಇದಕ್ಕೆ ತೃಪ್ತರಾಗದ ಶಾಸಕರು, ಐಕಿಯಾ ಸಂಸ್ಥೆ ಆರಂಭಗೊಂಡ ನಂತರ ಈ ಭಾಗದಲ್ಲಿ ಭಾರಿ ಸಮಸ್ಯೆಯಾಗಿದೆ. ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿಗಳೇ ಹೋಗಿ ಈ ಮಾಲ್ ಉದ್ಘಾಟನೆ ಮಾಡಿದ್ದರು ಎಂದು ದೂರಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next