ನವದೆಹಲಿ: ಪೆಗಾಸಸ್ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿ “ನ್ಯೂಯಾರ್ಕ್ ಟೈಮ್ಸ್’ ವರದಿ ಪ್ರಕಟವಾಗುತ್ತಿದ್ದಂತೆ, ಸುಪ್ರೀಂ ಕೋರ್ಟ್‌ಗೆ ಹೊಸ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಪತ್ರಿಕೆಯ ವರದಿಯನ್ನು ನ್ಯಾಯಾಲಯವು ಪರಿಗಣಿಸಿ, 2017ರಲ್ಲಿ ಇಸ್ರೇಲ್ ಜೊತೆ ನಡೆದ ರಕ್ಷಣಾ ಒಪ್ಪಂದದ ಕುರಿತು ತನಿಖೆಗೆ ಆಗ್ರಹಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇಸ್ರೇಲ್‌ನಿಂದ ಭಾರತ ಸರ್ಕಾರವು 15 ಸಾವಿರ ಕೋಟಿ ರೂ. ಮೊತ್ತದ ಶಸ್ತ್ರಾಸ್ತ್ರಗಳನ್ನು ಖರೀದಿಸಿದಾಗ, ಆ ಪ್ಯಾಕೇಜ್‌ನೊಂದಿಗೆ ಪೆಗಾಸಸ್ ಸ್ಪೈವೇರ್ ಅನ್ನೂ ಖರೀದಿಸಿತ್ತು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಆ ವರದಿ ಪ್ರಕಟವಾಗುತ್ತಲೇ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿದ್ದವು. ಇದರ ನಡುವೆಯೇ, ಭಾನುವಾರ ವಕೀಲ ಎಂ.ಎಲ್.ಶರ್ಮಾ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಪ್ರತ್ಯೇಕ ಪ್ರಕರಣ : ಸಮುದ್ರ ಪಾಲಾಗುತ್ತಿದ್ದ ಎರಡು ವರ್ಷದ ಮಗು ಮತ್ತು ಯುವಕನ ರಕ್ಷಣೆ
ಇಸ್ರೇಲ್ ಜತೆಗಿನ ವಹಿವಾಟು ಕುರಿತು ಸಂಬಂಧಪಟ್ಟ ಅಧಿಕಾರಿ ಅಥವಾ ಪ್ರಾಧಿಕಾರದ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ತನಿಖೆ ಆರಂಭಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.