Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಬಿಜೆಪಿ ಸರ್ಕಾರದ ಅಭಿವೃದ್ಧಿಯನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲಾಗುತ್ತಿಲ್ಲ, ಹಾಗಾಗಿ ಕಾಂಗ್ರೆಸ್ ಈ ಕುತಂತ್ರವನ್ನು ಬಿಜೆಪಿ ವಿರುದ್ಧ ಪ್ರಯೋಗ ಮಾಡುತ್ತಿದೆ ಎಂದು ಅವರು ಇಂದು(ಬುಧವಾರ, ಜುಲೈ 21) ಹೇಳಿದ್ದಾರೆ.
Related Articles
Advertisement
ವಿದೇಶಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಯನ್ನು ತಡೆಯಲು ಕಾಂಗ್ರೆಸ್ ಬಯಸಿದೆ ಎಂದು ಅವರು ಆರೋಪಿಸಿದ್ದಾರೆ.
ಕೇಂದ್ರ ಬಿಜೆಪಿ ಕೂಡ ಕಾಂಗ್ರೆಸ್ ಆರೋಪವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, 50 ವರ್ಷಕ್ಕೂ ಹೆಚ್ಚು ಕಾಲ ಈ ದೇಶವನ್ನು ಆಳಿದ ಕಾಂಗ್ರೆಸ್ ಗೆ ಇದೊಂದು ಹೊಸ ಅಸ್ತ್ರ ಸಿಕ್ಕಿದೆ. ಆಧಾರ ರಹಿತ ಆರೋಪ ಮಾಡುವುದು ಕಾಂಗ್ರೆಸ್ ಗೆ ರೂಢಿಯಾಗಿದೆ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ದೇಶದ ಪ್ರಮುಖ ಸುದ್ದಿ ಸಂಸ್ಥೆಗಳಾದ ಹಿಂದೂಸ್ತಾನ್ ಟೈಮ್ಸ್, ದಿ ಹಿಂದೂ, ಇಂಡಿಯಾ ಟುಡೆ, ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ನೆಟ್ ವರ್ಕ್ 18 ಗಳಲ್ಲಿ ಕಾರ್ಯ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ರಕ್ಷಣಾ, ಗೃಹ ಸಚಿವಾಲಯ, ಚುನಾವಣಾ ಆಯೋಗ ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುದ್ದಿ ಮಾಡಿರುವುದಕ್ಕೆ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.
ಆದರೆ, ಕೇಂದ್ರ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಈ ವರದಿಯು ಭಾರತೀಯ ಪ್ರಜಾಪ್ರಭುತ್ವ ಮತ್ತು ಅದರ ಸುಸ್ಥಾಪಿತ ಸಂಸ್ಥೆಗಳನ್ನು ಕೆಣಕುವ ಪ್ರಯತ್ನ. ಈ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.
ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಬ್ರಿಟಿಷ್ ಹೈಕಮಿಷನ್ ವಕ್ತಾರರು, ವೈಯಕ್ತಿಕ ಪ್ರಕರಗಳ ಬಗ್ಗೆ ಯಾವುದೇ ಊಹಾಪೋಹಗಳಿಗೆ ಒಳಗಾಗುವುದಿಲ್ಲ ಎಂದು ಹೇಳಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ : ಒಂದು ಸಾವಿರ ವರ್ಷದಲ್ಲೇ ಇದೇ ಮೊದಲ ಬಾರಿ ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಚೀನಾ!