Advertisement

ಪೆಗಾಸಸ್:ಬಿಜೆಪಿಯ ಅಭಿವೃದ‍್ದಿ ಯೋಜನೆಗಳನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲಾಗುತ್ತಿಲ್ಲ: ಧಾಮಿ

10:59 AM Jul 21, 2021 | Team Udayavani |

ಉತ್ತರಾಖಂಡ : ಪೆಗಾಸಸ್ ಮೂಲಕ ಜಗತ್ತಿನ ಪ್ರಮುಖ ಪತ್ರಕರ್ತರು, ರಾಜಕೀಯ ಕ್ಷೇತ್ರದ ವ್ಯಕ್ತಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡುವ ಪ್ರಮುಖರ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿರುದ್ಧ ಉತ್ತರಾಖಂಡದ ನೂತನ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ,  ಬಿಜೆಪಿ ಸರ್ಕಾರದ ಅಭಿವೃದ್ಧಿಯನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲಾಗುತ್ತಿಲ್ಲ, ಹಾಗಾಗಿ ಕಾಂಗ್ರೆಸ್ ಈ ಕುತಂತ್ರವನ್ನು ಬಿಜೆಪಿ ವಿರುದ್ಧ ಪ್ರಯೋಗ ಮಾಡುತ್ತಿದೆ ಎಂದು ಅವರು ಇಂದು(ಬುಧವಾರ, ಜುಲೈ 21) ಹೇಳಿದ್ದಾರೆ.

ಇದನ್ನೂ ಓದಿ : ಸ್ಟಾರ್ಕ್, ಹ್ಯಾಜಲ್ ವುಡ್ ದಾಳಿಗೆ ನಲುಗಿದ ವೆಸ್ಟ್ ಇಂಡೀಸ್: ಆಸೀಸ್ ಗೆ 133 ರನ್ ಅಂತರದ ಜಯ

ಬಿಜೆಪಿ ಅಭಿವೃದ್ಧಿಯ ಹೆಜ್ಜೆಗಳನ್ನು ಕುಂಟಿತಗೊಳಿಸುವುದಕ್ಕೆ ಕಾಂಗ್ರೆಸ್ ಶತ ಪ್ರಯತ್ನ ಮಾಡುತ್ತಿದೆ. ಅದಕ್ಕಾಗಿಯೇ ಮುಂಗಾರು ಅಧಿವೆಶನದ ಹಿಂದಿನ ದಿನ ಈ ಪೆಗಾಸಸ್ ವಿಚಾರವನ್ನು ತಂದು ರಾಜಕೀಯದಲ್ಲಿ ಒಂದಿಷ್ಟು ಗೊಂದಲವನ್ನು ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಸಂಸತ್ತಿನಲ್ಲಿ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಅವಕಾಶ ಮಾಡಿಕೊಡಬಾರದು, ಬಿಜೆಪಿ ಸರ್ಕಾರದ ಅಭಿವೃದ‍್ದಿ ಕಾರ್ಯಗಳಿಗೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದ ಈ ಪೆಗಾಸಸ್ ಪ್ರಾಜೆಕ್ಟ್ ವಿಚಾರವನ್ನು ಕಾಂಗ್ರೆಸ್ ತನ್ನ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂದಿದ್ದಾರೆ.

Advertisement

ವಿದೇಶಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಯನ್ನು ತಡೆಯಲು ಕಾಂಗ್ರೆಸ್ ಬಯಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಬಿಜೆಪಿ ಕೂಡ ಕಾಂಗ್ರೆಸ್ ಆರೋಪವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, 50 ವರ್ಷಕ್ಕೂ ಹೆಚ್ಚು ಕಾಲ ಈ ದೇಶವನ್ನು ಆಳಿದ ಕಾಂಗ್ರೆಸ್ ಗೆ ಇದೊಂದು ಹೊಸ ಅಸ್ತ್ರ ಸಿಕ್ಕಿದೆ. ಆಧಾರ ರಹಿತ ಆರೋಪ ಮಾಡುವುದು ಕಾಂಗ್ರೆಸ್ ಗೆ ರೂಢಿಯಾಗಿದೆ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ದೇಶದ ಪ್ರಮುಖ ಸುದ್ದಿ ಸಂಸ್ಥೆಗಳಾದ  ಹಿಂದೂಸ್ತಾನ್ ಟೈಮ್ಸ್, ದಿ ಹಿಂದೂ, ಇಂಡಿಯಾ ಟುಡೆ, ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ನೆಟ್ ವರ್ಕ್ 18 ಗಳಲ್ಲಿ ಕಾರ್ಯ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ರಕ್ಷಣಾ, ಗೃಹ ಸಚಿವಾಲಯ, ಚುನಾವಣಾ ಆಯೋಗ ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುದ್ದಿ ಮಾಡಿರುವುದಕ್ಕೆ  ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

ಆದರೆ, ಕೇಂದ್ರ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಈ ವರದಿಯು ಭಾರತೀಯ ಪ್ರಜಾಪ್ರಭುತ್ವ ಮತ್ತು ಅದರ ಸುಸ್ಥಾಪಿತ ಸಂಸ್ಥೆಗಳನ್ನು ಕೆಣಕುವ ಪ್ರಯತ್ನ. ಈ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಬ್ರಿಟಿಷ್ ಹೈಕಮಿಷನ್ ವಕ್ತಾರರು, ವೈಯಕ್ತಿಕ  ಪ್ರಕರಗಳ ಬಗ್ಗೆ ಯಾವುದೇ ಊಹಾಪೋಹಗಳಿಗೆ ಒಳಗಾಗುವುದಿಲ್ಲ ಎಂದು ಹೇಳಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ : ಒಂದು ಸಾವಿರ ವರ್ಷದಲ್ಲೇ ಇದೇ ಮೊದಲ ಬಾರಿ ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಚೀನಾ!

Advertisement

Udayavani is now on Telegram. Click here to join our channel and stay updated with the latest news.

Next